ಕವಿ ಬಿ.ಆರ್. ಲಕ್ಷ್ಮಣರಾವ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕನ್ನಡಿಗರಿಗೇ ಕನ್ನಡ ಕಲಿಸಬೇಕಿದೆ: ಬಿ.ಆರ್. ಲಕ್ಷ್ಮಣರಾವ್

ಕನ್ನಡದ ಮೇಲೆ ಆಂಗ್ಲ ಭಾಷೆ ಸವಾರಿ ಮಾಡುತ್ತಿದೆ. ರಾಜಧಾನಿಯಲ್ಲಿ ಪರಭಾಷೆಯ ವ್ಯಾಮೋಹ ಹೆಚ್ಚುತ್ತಿದ್ದು ಕನ್ನಡಿಗರಿಗೇ ಕನ್ನಡ ಕಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕವಿ ಬಿ.ಆರ್. ಲಕ್ಷ್ಮಣರಾವ್...

ಬೆಂಗಳೂರು: ಕನ್ನಡದ ಮೇಲೆ ಆಂಗ್ಲ ಭಾಷೆ ಸವಾರಿ ಮಾಡುತ್ತಿದೆ. ರಾಜಧಾನಿಯಲ್ಲಿ ಪರಭಾಷೆಯ ವ್ಯಾಮೋಹ ಹೆಚ್ಚುತ್ತಿದ್ದು ಕನ್ನಡಿಗರಿಗೇ ಕನ್ನಡ ಕಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕವಿ ಬಿ.ಆರ್. ಲಕ್ಷ್ಮಣರಾವ್ ವಿಷಾದಿಸಿದರು.

ರಾಜಾಜಿನಗರದ ವೆಂಕಟ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನಡೆದ 60ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಸಾವಿಲ್ಲ. ಉದ್ಯೋಗಕ್ಕೆ ಆಂಗ್ಲ ಭಾಷೆ ಬೇಕು, ಹಾಗಂತ ಕನ್ನಡವನ್ನು ಮರೆಯಬಾರದು. ಮುಂದಿನ ಪೀಳಿಗೆಗೆ ಕನ್ನಡವನ್ನು ತಲುಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಶಿಕ್ಷಕರು ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರೊಂದಿಗೆ ತಾವು ಪ್ರತಿನಿತ್ಯ ಅಧ್ಯಯನಶೀಲರಾಗಬೇಕೆಂದು ಹೇಳಿದರು.

ಸೇಂಟ್ ಆನ್ಸ್ ಮತ್ತು ವೀನಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಟಿ. ಬಾಲಕೃಷ್ಣ, ಡಾ. ಸುಲೋಚನಾ ಬಾಲಕೃಷ್ಣ, ಸಂಸ್ಥೆಯ ಉಪಾಧ್ಯಕ್ಷ ಬಿ. ವೆಂಕಟೇಶ್, ನಿರ್ದೇಶಕ ಬಿ. ಶೇಖರ್, ಉಪಪ್ರಾಂಶುಪಾಲೆ ಪ್ರಭಾವತಿ, ಶೈಕ್ಷಣಿಕ ಸಲಹೆಗಾರ್ತಿ ಪದ್ಮ, ಕನ್ನಡ ವಿಭಾಗದ ಮುಖ್ಯಸ್ಥ ನಾಗವೇಂದ್ರಸ್ವಾಮಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ