(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ನಾಳೆಯಿಂದ ಕೃಷಿ ಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಈ ವರ್ಷವೂ ನ.19ರಿಂದ 22ರವರೆಗೆ ನಾಲ್ಕು ದಿನಗಳ ಕಾಲ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಈ ವರ್ಷವೂ ನ.19ರಿಂದ 22ರವರೆಗೆ ನಾಲ್ಕು ದಿನಗಳ ಕಾಲ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ.

ರಾಜ್ಯದ ವಿವಿಧ ಅಭಿವೃದ್ಧಿ ಇಲಾಖೆಗಳು, ರಾಷ್ಟ್ರೀಯ ಸಂಶೋಧನಾ ಸಂಸ್ಥೆಗಳು, ಹಣಕಾಸು ಸಂಸ್ಥೆಗಳು ಹಾಗೂ ಕೃಷಿ ಉದ್ದಿಮೆದಾರರ ಸಹಯೋಗದಲ್ಲಿ ಆಯೋಜಿಸುತ್ತಿರುವ ಈ ಮೇಳವು ಕೃಷಿಕರಲ್ಲಿ ಆಧುನಿಕ ತಾಂತ್ರಿಕತೆಗಳ ಅರಿವು ಹಾಗೂ ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ ಎಂದು ಕೃಷಿ ವಿವಿ ಕುಲಪತಿ ಡಾ.ಎಚ್.ಶಿವಣ್ಣ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೃಷಿ ಮೇಳವನ್ನು ನ.19ರಂದು ಬೆಳಗ್ಗೆ 11.30ಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಉದ್ಘಾಟಿಸಲಿದ್ದಾರೆ. ಕೃಷಿ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಎಚ್.ಪಿ.ರಾಜೇಶ್, ಸರ್ಕಾರ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಆಯುಕ್ತ ಪಾಂಡುರಂಗ ಬಿ.ನಾಯಕ್ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ಬೆಂಗಳೂರು ಗ್ರಾಮಾಂತರ, ನಗರ ಮತ್ತು ರಾಮನಗರ ಜಿಲ್ಲೆಗಳ ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮತ್ತು ರೈತ ಮಹಿಳಾ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಹೇಳಿದರು.

ನ.20ರಂದು ನಡೆಯುವ ಹಸಿರು ಕ್ರಾಂತಿಯ ಸುವರ್ಣ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕೃಷಿ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆ ವಹಿಸುವರು. ಮುಂದಿನ ಎರಡು ದಿನ ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ, ತಾಂತ್ರಿಕ ಸಮಾವೇಶಗಳು ಜರುಗಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಕೃಷಿ ತಜ್ಞರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕೃಷಿ ಮೇಳದ ಆಕರ್ಷಣೆಗಳು: ಮಣ್ಣು ಮತ್ತು ನೀರಿನ ಸಂರಕ್ಷಣೆ, ಜಲಾನಯನ ಅಬಿsವೃದಿಟಛಿ ತಂತ್ರಜ್ಞಾನಗಳು, ನೀರು ಸಂಗ್ರಹಣಾ ರಚನೆಗಳ ಮಾದರಿಗಳು, ನೀರಾವರಿ ಪದಟಛಿತಿಗಳು, ಹನಿ ನೀರಾವರಿ, ಅಂತರ್ಜಲ ಮರುಪೂರಣ, ಪರ್ಯಾಯ ಇಂಧನ ಮೂಲಗಳ ಬಳಕೆಯಿಂದ ಇಂಧನ ಸ್ವಾವಲಂಬನೆ, ಹಸಿರು ಮನೆಗಳು, ವೈವಿಧ್ಯಮಯ ಬೆಳೆ ಪದ್ಧತಿ, ಸುಸ್ಥಿರ ಆದಾಯ ಕಲ್ಪಿಸಬಲ್ಲ ಜಾನುವಾರು ಸಾಕಾಣಿಕೆ ನೈಜ ಮಾದರಿಗಳನ್ನು ಕೃಷಿಕರಿಗೆ ಪರಿಚಯಿಸಲು ನಿರ್ಧರಿಸಲಾಗಿದೆ.

ಜತೆಗೆ ಸುಧಾರಿತ ತಳಿ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆಗಳು, ಸಮಗ್ರ ಕೃಷಿ ಪದ್ಧತಿ ಪ್ರಾತ್ಯಕ್ಷಿಕೆ, ಒಣಭೂಮಿ ಕೃಷಿಯಲ್ಲಿ ಸಮಗ್ರ ಬೆಳೆ ನಿರ್ವಹಣೆ, ವೈರುಧ್ಯಮಯ ಬೆಳೆ ಪರಿಸ್ಥಿತಿಯಲ್ಲಿ ಪರ್ಯಾಯ ಬೆಳೆ ಯೋಜನೆ, ಸುಧಾರಿತ ತೋಟಗಾರಿಕಾ ಪದ್ಧತಿಗಳು, ಔಷಧೀಯ ಹಾಗೂ ಸುಗಂಧ ದ್ರವ್ಯ ಸಸ್ಯಗಳು, ನೀರಿನ ಸಮರ್ಪಕ ಬಳಕೆ ಕುರಿತ ತಾಂತ್ರಿಕತೆಗಳು, ಅರೆನೀರಾವರಿ ಬತ್ತದ ಕೃಷಿ, ಸಾವಯವ ಕೃಷಿ ಯಾಂತ್ರಿಕರಣ ಹಾಗೂ ಕೃಷಿ ಉಪಕರಣಗಳು, ತಾಂತ್ರಿಕತೆಗಳು, ಆಹಾರ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಪಶುಸಂಗೋಪನೆ, ಕೋಳಿ ಸಾಕಾಣಿಕೆ ಹಾಗೂ ಹೈನುಗಾರಿಕೆಯ ಸುಧಾರಿತ ಪದಟಛಿತಿಗಳ ಬಗ್ಗೆ ಮೇಳದಲ್ಲಿ ಅಗತ್ಯ ಮಾಹಿತಿ ನೀಡಲಾಗುತ್ತಿದೆ.

600 ಮಳಿಗೆಗಳು: ಈ ಬಾರಿ ಕೃಷಿ ಮೇಳದಲ್ಲಿ 600 ಮಳಿಗೆಗಳ ವಸ್ತುಪ್ರದರ್ಶನ ಹಾಗೂ ವಿವಿಧ ತಳಿ ತಾಂತ್ರಿಕತೆಗಳ ಬೆಳೆ ಪ್ರಾತ್ಯಕ್ಷಿಕೆ ಆಯೋಜಿಸಲಾಗುತ್ತಿದೆ. ವಿವಿಧ ಹಣಕಾಸು ಸಂಸ್ಥೆಗಳು, ಬಿತ್ತನೆ ಬೀಜ ಕಂಪನಿಗಳು, ರಸಗೊಬ್ಬರ ಕಂಪನಿಗಳು, ಹಣ್ಣು ಹಾಗೂ ತರಕಾರಿ ನರ್ಸರಿಗಳು ಸೇರಿದಂತೆ ಕೃಷಿಗೆ ಸಂಬಂಧಿಸಿದಂತೆ ಸರ್ಕಾರಿ ಮತ್ತು ಸರ್ಕಾರೇತರ
ಸಂಘ-ಸಂಸ್ಥೆಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸಲಿವೆ. ಕೃಷಿಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಮಾಹಿತಿ ನೀಡುವ ತಜ್ಞರ ಸಲಹಾ ಕೇಂದ್ರಗಳನ್ನೂ ತೆರೆಯಲಾಗುತ್ತಿದೆ ಎಂದರು.

ಮೂರು ತಳಿ ಪರಿಚಯ: ಪ್ರಸಕ್ತ ಸಾಲಿನಲ್ಲಿ ವಿವಿ ಅಬಿsವೃದಿಟಛಿಪಡಿಸಿರುವ ಮೂರು ತಳಿ ತಂತ್ರಜ್ಞಾನಗಳನ್ನು ಕೃಷಿ ಮೇಳದಲ್ಲಿ ಪರಿಚಯಿಸಲಾಗುತ್ತಿದೆ. ನೆಲಗಡಲೆ (ಕಡಲೆಕಾಯಿ)-ಜಿಕೆವಿಕೆ 5, ಹುಣಸೆ- ಜಿಕೆವಿಕೆ 17 ಹಾಗೂ ಮೇವಿನ ಅಲಸಂದೆ- ಎಂಎಫ್ ಸಿ 08-14 ನೂತನ ತಳಿ ತಂತ್ರಜ್ಞಾನಗಳಾಗಿವೆ.

ಹಳ್ಳಿ ಸಂತೆ: ಇದೇ ಮೊದಲ ಬಾರಿಕೆ ಕೃಷಿ ಮೇಳದಲ್ಲಿ `ಹಳ್ಳಿ ಸಂತೆ' ಆರಂಭಿಸಲಾಗುತ್ತಿದೆ. ಗ್ರಾಮೀಣ ಉದ್ಯಮಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಗುಡಿ ಕೈಗಾರಿಕೆ, ಆಹಾರ ಮೌಲ್ಯವರ್ಧನೆ, ಕರಕುಶಲ, ಕೈಮಗ್ಗ ಮೊದಲಾದ ಗ್ರಾಮೀಣ ಉದ್ದಿಮೆ ಮತ್ತು ಉಪಕಸುಬುಗಳಲ್ಲಿ ತೊಡಗಿಸಿಕೊಂಡಿರುವ ಸ್ವಸಹಾ ಯ ಗುಂಪುಗಳು, ರೈತ-ಗುಂಪುಗಳು, ಸಣ್ಣ ಉದ್ದಿಮೆದಾರರರು ಹಾಗೂ ಕುಶುಲ ಕರ್ಮಿಗಳು ತಯಾರಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!