ಜಿಲ್ಲಾ ಸುದ್ದಿ

ಸಂತ್ರಸ್ತರನ್ನು ನಿರ್ಲಕ್ಷಿಸುತ್ತಿಲ್ಲ: ಸಚಿವ ಖಾದರ್‍

Shilpa D

ಬೆಂಗಳೂರು: ಸರ್ಕಾರ ಎಂಡೋ ಸಲ್ಫಾನ್ ಸಂತ್ರಸ್ತರನ್ನು ನಿರ್ಲಕ್ಷಿಸುತ್ತಿಲ್ಲ. ಕೆಲವರು ಎಂಡೋ ಸಂತ್ರಸ್ತರಲ್ಲದಿದ್ದರೂ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವ ಬಗ್ಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಿಜವಾದ ಸಂತ್ರಸ್ತರನ್ನು ಗುರುತಿಸಿ ಗುರುತಿನ ಚೀಟಿ ನೀಡಲಾಗುತ್ತಿದೆ.

ಈಗಾಗಲೇ 2693 ಸಂತ್ರಸ್ತರಿಗೆ ಗುರುತಿನ ಚೀಟಿ ನೀಡಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಇದೀಗ ಮತ್ತಷ್ಟು ಸಂತ್ರಸ್ತರ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಹಾಗಾಗಿ 6 ತಿಂಗಳ ಮಾಸಾಶನ ತಡೆಹಿಡಿಯಲಾಗಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಮಾಸಾಶನದ ಹಣ ಖಜಾನೆಯಲ್ಲಿ ಭದ್ರವಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಸಂತ್ರಸ್ತರಿಗೂ ಗುರುತಿನ ಚೀಟಿ ನೀಡಿ, ಅಗತ್ಯ ಸವಲತ್ತುಗಳನ್ನು ಕಲ್ಪಿಸಲಾಗುವುದು. ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು

SCROLL FOR NEXT