ಜಿಲ್ಲಾ ಸುದ್ದಿ

ಪ್ರಸಕ್ತ ವರ್ಷ ರಾಜ್ಯದಲ್ಲಿ 1060 ಅತ್ಯಾಚಾರ ಪ್ರಕರಣ: ಜಿ. ಪರಮೇಶ್ವರ್

Shilpa D

ವಿಧಾನಪರಿಷತ್ತು:  2015ನೇ ಸಾಲಿನಲ್ಲಿ  ರಾಜ್ಯದಲ್ಲಿ 1060 ಅತ್ಯಾಚಾರ ಮತ್ತು 4025 ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ವಿ.ಸೋಮಣ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಪೈಕಿ 5 ಅತ್ಯಾಚಾರ ಪ್ರಕರಣ ಮತ್ತು ಎರಡು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 94 ಪ್ರಕರಣ ವರದಿಯಾಗಿದ್ದು, 81 ಪ್ರಕರಣಗಳಲ್ಲಿ 92 ಆರೋಪಿಗಳನ್ನು ಬಂಧಿಸಲಾಗಿದೆ. ಅದೇ ರೀತಿ ಲೈಂಗಿಕ ದೌರ್ಜನ್ಯ ಪ್ರಕರಣಗಳೂ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 882 ಪ್ರಕರಣಗಳು ವರದಿಯಾಗಿವೆ.

ಇದರಲ್ಲಿ 687 ಪ್ರಕರಣಗಳಲ್ಲಿ 838 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಶಿಕ್ಷೆಗೊಳಪಡಿಸುವ ಸಲುವಾಗಿ ರಾಜ್ಯದಲ್ಲಿ ಹತ್ತು ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಅದೇ ರೀತಿ ಪ್ರಕರಣಗಳನ್ನು ತಡೆಗಟ್ಟಲು ಒಂಬತ್ತು ಮಾನವ ಕಳ್ಳಸಾಗಣೆ ತಡೆ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಪರಮೇಶ್ವರ್ ವಿವರಣೆ ನೀಡಿದರು.

SCROLL FOR NEXT