ಬೆಂಗಳೂರು: ಬೆಂಗಳೂರಿನ ಪುಲಕೇಶಿ ನಗರದಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಆರೋಪದಲ್ಲಿ ದೂರು ದಾಖಲಿಸಿ ಕೊಳ್ಳದೇ ಕರ್ತವ್ಯ ಲೋಪವೆಸಗಿದ್ದ ಇನ್ಸ್‌ಪೆಕ್ಟರ್ ಮಹಮ್ಮದ್ ರಫಿ ವಿರುದ್ಧ ಪುಲಕೇಶಿ ನಗರದ ಉಪ ವಲಯದ ಸಹಾಯಕ ಪೊಲೀಸ್ ಆಯುಕ್ತರು ದಾಖಲಿಸಿದ್ದ ದೂರು ರದ್ದುಗೊಳಿ ಸಲು ಹೈಕೋರ್ಟ್ ನಿರಾಕರಿಸಿದೆ.
ತಮ್ಮ ವಿರುದ್ಧದ ದಾಖಲಾಗಿರುವ ಎಫ್ಐಆರ್ ಮತ್ತು ತನಿಖೆ ರದ್ದುಗೊಳಿಸುವಂತೆ ಕೋರಿ ರಫಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ರದ್ದುಗೊಳಿಸಲು ನಿರಾಕರಿಸಿ ದೆ. ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ದೂರು ದಾಖಲಿಸದೆ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಎಫ್ಐಆರ್ ರದ್ದುಗೊಳಿಸಲಾಗದು.
ಪ್ರಕರಣ ತನಿಖಾ ಹಂತದಲ್ಲಿರುವಾಗ ನ್ಯಾಯಾ ಲಯ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿತು. 2 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಬೇಕೆಂದು ಪ್ರಕರಣದ ತನಿಖಾಧಿಕಾರಿಗೆ ನಿರ್ದೇಶಿಸಿತು.