ಹೈ ಕೋರ್ಟ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕಾನೂನು ಬಾಹಿರ ಆಸ್ಪತ್ರೆ: ಸರ್ಕಾರಕ್ಕೆ ನೋಟಿಸ್

ತಿಪ್ಪಗೊಂಡನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಹೋದರ ಜಿ.ಶಿವಪ್ರಸಾದ್ ಕಾನೂನು ಬಾಹಿರವಾಗಿ ಆಸ್ಪತ್ರೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಹೈ ಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ...

ಬೆಂಗಳೂರು: ತಿಪ್ಪಗೊಂಡನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಹೋದರ ಜಿ.ಶಿವಪ್ರಸಾದ್ ಕಾನೂನು ಬಾಹಿರವಾಗಿ ಆಸ್ಪತ್ರೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಹೈ ಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನೆಲಮಂಗಲದ ನಿವಾಸಿ ಎನ್. ರಾಜಣ್ಣ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈಗಾಗಲೇ ನಿರ್ಮಾಣವಾಗಿರುವ ಕಟ್ಟಡವನ್ನು ತೆರವುಗೊಳಿಸುವ ಸಂಬಂಧ ಅರ್ಜಿಯು ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಸೂಚಿಸಿದೆ.

ಪ್ರಕರಣವೇನು?: ಸರ್ಕಾರ 2003ರಲ್ಲಿ ತಿಪ್ಪಗೊಂಡನಹಳ್ಳಿಜಲಾಶ ಯದ ಅಚ್ಚುಕಟ್ಟು ಪ್ರದೇಶವನ್ನು ಸಂರಕ್ಷಿತ ಮತ್ತು ಸೂಕ್ಷ್ಮ ಪ್ರದೇಶವನ್ನು ಸಂರಕ್ಷಿತ ಮತ್ತು ಸೂಕ್ಷ್ಮ ಪ್ರದೇಶವೆಂದು ಘೋಷಣೆ ಮಾಡಿದೆ. ಅದರ ಪ್ರಕಾರ ಈ ಪ್ರದೇಶವನ್ನು ಕೃಷಿಯೇತರ ಸೇರಿದಂತೆ ಯಾವುದೇ ರೀತಿಯ ವಾಣಿಜ್ಯ ಕಾರ್ಯಗಳಿಗೆ ಬಳಸುವಂತಿಲ್ಲ. ಆದರೆ, ಶಿವಪ್ರಸಾದ್ ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ. ಅಲ್ಲದೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಒಫ್ಪಿಗೆ ಪಡೆಯದೆ ಅಕ್ರಮ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ