ನಾಗೇಶ್ ಪ್ರೀತಂ 
ಜಿಲ್ಲಾ ಸುದ್ದಿ

ಮಾಜಿ ಶಾಸಕ ಶಂಕರಲಿಂಗೇ ಗೌಡರ ಪುತ್ರ ಆತ್ಮಹತ್ಯೆಗೆ ಯತ್ನ

ಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.

ಮೈಸೂರು: ಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.

ಇಂದು ಬೆಳಗ್ಗೆ ವಾಯು ವಿಹಾರಕ್ಕೆ ವೇಳೆ ನಾಗೇಶ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ. ಈ ಸಂಬಂಧ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಾಗೇಶ್ ಅವರು ಆತ್ಮಹತ್ಯೆ ಯತ್ನಿಸಿರಬಹುದು ಎಂದು ಶಂಕಿಸಲಾಗಿದೆ.

ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಚ್‌.ಎಸ್‌. ಶಂಕರಲಿಂಗೇಗೌಡ ಅವರು 2014ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ರಾಜಕೀಯ ಕ್ಷೇತ್ರದಿಂದ ದೂರವಿದ್ದ ನಾಗೇಶ್ ಪ್ರೀತಂ ಉದ್ಯಮ ನಡೆಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಮಹಿಳೆ ಫೋಟೋ ಮಾರ್ಫ್ ಮಾಡಿ ಪ್ರಧಾನಿ ಮೋದಿ ಫೋಟೋದೊಂದಿಗೆ ಪ್ರದರ್ಶನ: CJP ವಿರುದ್ಧ FIR ದಾಖಲು

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ