ಸುಭಾಷ್ ಬಿ.ಅಡಿ 
ಜಿಲ್ಲಾ ಸುದ್ದಿ

ಆರೋಪಗಳಲ್ಲಿ ಹುರುಳಿಲ್ಲ, ರಾಜೀನಾಮೆ ನೀಡಲ್ಲ: ನ್ಯಾ. ಸುಭಾಷ್ ಬಿ.ಅಡಿ

ನನ್ನ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು...

ಬೆಂಗಳೂರು: ನನ್ನ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಉಪಲೋಕಾಯುಕ್ತ ನ್ಯಾ. ಸುಭಾಷ್ ಬಿ.ಅಡಿ ಸ್ಪಷ್ಟಪಡಿಸಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದೂ ಇಲ್ಲ ಎಂದು ಹೇಳಿದ ಅವರು ನಿವೃತ್ತ ಉಪಲೋಕಾಯುಕ್ತ ಮಜಗೆ ತಮ್ಮ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಮತ್ತು ಕಾಂಗ್ರೆಸ್ ಶಾಸಕರು ತಮ್ಮ ಪದಚ್ಯುತಿಗೆ ಯಾವ ಆಧಾರದ ಮೇಲೆ ಸಹಿ ಸಂಗ್ರಹ ಮಾಡುತ್ತಿದ್ದಾರೆ ಎಂಬ ಬಗ್ಗೆ ನನಗೆ ಆಶ್ಚರ್ಯ ಉಂಟಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿ ಮೂಲದ ವೈದ್ಯೆ ಡಾ.ಶೀಲಾ ಪ್ರಕರಣದ ಕೇಸ್ ನನ್ನ ಬಳಿಗೆ ಬಂದಿದ್ದರಿಂದ ಅದರ ಕಡತ ಪರಿಶೀಲಿಸಲಾಯಿತೆ ಹೊರತು ನಾನು ಮಜಗೆ ಅವರ ಕಾರ್ಯವ್ಯಾಪ್ತಿಯೊಳಗೆ ಮೂಗು ತೂರಿಸಿಲ್ಲ. ನನ್ನ ಅಳಿಯನ ವಿರುದ್ಧ 2012ರಲ್ಲಿ ಖಾಸಗಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ನಾನು ನ್ಯಾಯಮೂರ್ತಿ ಸ್ಥಾನದಲ್ಲಿದ್ದೆ. ಆದರೂ ಪೊಲೀಸ್ ತನಿಖೆಯಲ್ಲಿ ಮಧ್ಯ ಪ್ರವೇಶಿಸಿರಲಿಲ್ಲ. ತಮ್ಮ ವಿರುದ್ಧದ ಖಾಸಗಿ ದೂರಿನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನನ್ನ ಅಳಿಯ ಇಡೀ ಪ್ರಕರಣದಿಂದ ದೋಷಮುಕ್ತ ಹೊಂದಿದ್ದರು ಎಂದು ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ