ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರೌಡಿ ಕಪಾಲಿಯ ನಾಲ್ವರು ಸಹಚರರ ಸೆರೆ

ಕುಖ್ಯಾತ ರೌಡಿ ಆನಂದ್ ಅಲಿಯಾಸ್ ಕಪಾಲಿ ಮತ್ತು ಆತನ ಸಹಚರರಾದ ರಾಜರಾಜನ್, ಎನ್. ರವಿ, ಪ್ರೇಮ್ ಕುಮಾರ್ ಮತ್ತು ಚರಣ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ತೊಡಗಲು ಸಂಚು ರೂಪಿಸಿದ್ದ ಎರಡು ಕುಖ್ಯಾತ ರೌಡಿಗಳ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಅಪಹರಣ ಮಾಡಿ ಕೊಲೆ ಹಾಗೂ ದರೋಡೆಗೆ ಸಂಚು ರೂಪಿಸಿದ್ದ ರೌಡಿಗಳ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಕುಖ್ಯಾತ ರೌಡಿ ಆನಂದ್ ಅಲಿಯಾಸ್ ಕಪಾಲಿ ಮತ್ತು ಆತನ ಸಹಚರರಾದ ರಾಜರಾಜನ್, ಎನ್. ರವಿ, ಪ್ರೇಮ್ ಕುಮಾರ್ ಮತ್ತು ಚರಣ್ ಬಂಧಿತರು. ನಿನ್ನೆ ರಾತ್ರಿ ಮಾಗಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಅಪಹರಣ ಮಾಡಿ ದರೋಡೆ ಮಾಡಲು ಸಂಚು ರೂಪಿಸಿದ್ರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿಆರೋಪಿಗಳಿಂದ ಮೂರು ಲಾಂಗು, ಖಾರದ ಪುಡಿ ಮತ್ತು ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ.

ಇನ್ನು ಸಿಸಿಬಿ ಅಧಿಕಾರಿಗಳು ಕೊಲೆ, ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ರೌಡಿಗಳನ್ನು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಪೈಪ್‌ಲೈನ್ ರಸ್ತೆಯಲ್ಲಿ ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುತ್ತಿದ್ದ  ಮಹೇಂದ್ರ, ಶಿವರಾಜು, ಸೋಪು ಮತ್ತು ಶಿವಕುಮಾರ ಬಂಧಿತ ಆರೋಪಿಗಳು.

ಬಂಧಿತರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು, ಎರಡು ಕಡೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಈ ಹಿಂದೆಯೂ ಕೂಡಾ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!