ವಿಧಾನ ಸೌಧ 
ಜಿಲ್ಲಾ ಸುದ್ದಿ

ಹಾಲು ಉತ್ಪಾದಕರಿಂದ ವಿಧಾನಸೌಧ ಚಲೋ

ಹಾಲಿಗೆ ಬೆಂಬಲ ಬೆಲೆ, ಸಬ್ಸಿಡಿ ದರದಲ್ಲಿ ಪಶು ಆಹಾರ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ...

ಬೆಂಗಳೂರು: ಹಾಲಿಗೆ ಬೆಂಬಲ ಬೆಲೆ, ಸಬ್ಸಿಡಿ ದರದಲ್ಲಿ ಪಶು ಆಹಾರ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮತ್ತು ರಾಜ್ಯ ಹಾಲು ಉತ್ಪಾದಕರು ಹಾಗೂ ನೌಕರರ ಹೋರಾಟ ಸಮಿತಿ (ಕೆಪಿಆರ್‍ಎಸ್)ದ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧ ಚಲೋ ಚಳವಳಿ ನಡೆಸಿದರು.

ರೈಲ್ವೆ ನಿಲ್ದಾಣದ ಆವರಣದಲ್ಲಿ ಸಮಾವೇಶಗೊಂಡ ನೂರಾರು ಪ್ರತಿಭಟನಾಕಾರರು ಬನ್ನಪ್ಪ ಪಾರ್ಕ್‍ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೈನುಗಾರಿಕೆ ಕ್ಷೇತ್ರವನ್ನು ನಿರ್ಲಕ್ಷಿಸಿವೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ 23.13 ಲಕ್ಷ ಕುಟುಂಬಗಳು ಹೈನುಗಾರಿಕೆಯಲ್ಲಿ ತೊಡಗಿವೆ. 14 ಜಿಲ್ಲಾ ಹಾಲು ಒಕ್ಕೂಟಗಳು ಹಾಗೂ 12,992 ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳಿಂದ ನಿತ್ಯ 72 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಆದರೆ, ಕೆಎಂಎಫ್  ಹಾಗೂ ಜಿಲ್ಲಾ ಮಟ್ಟದ ಹಾಲು ಒಕ್ಕೂಟಗಳ ಅಸಮರ್ಥತೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಹೈನುಗಾರಿಕೆ ಬಿಕ್ಕಟ್ಟಿಗೆ ಸಿಲುಕಿದ್ದು, ಅವಲಂಬಿತರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

ಪ್ರಸ್ತುತ ಹಾಲಿಗೆ ನೀಡುತ್ತಿರುವ ದರ ವಾಪಸ್ಸು ಪಡೆದು ಬೆಂಬಲ ಬೆಲೆ ನಿಗದಿ ಮಾಡಬೇಕು. ಗುಣಮಟ್ಟದ ಪಶು ಆಹಾರವನ್ನು ಸಬ್ಸಿಡಿ ದರದಲ್ಲಿ ರೈತರಿಗೆ ಪೂರೈಸಬೇಕು. ಪ್ರೋತ್ಸಾಹ ಧನವನ್ನು ಕನಿಷ್ಟ ರು10 ಗೆ ಏರಿಸಬೇಕು. ನಿಗದಿತ ಕೊಬ್ಬಿನಾಂಶ, ಎಸ್‍ಎನ್‍ಎಫ್ ಸೂತ್ರದಡಿ ರು. 4 ಪ್ರೋತ್ಸಾಹದನ ಕಡಿತ ಆದೇಶ ವಾಪಾಸು ಪಡೆಯಬೇಕು. ಹಾಲು ಉತ್ಪಾದಕರ ಸಂಘಗಳ ನೌಕರರನ್ನು ಖಾಯಂಗೊಳಿಸ ಬೇಕು. ಬೆಂಗಳೂರು ಹಾಲು ಒಕ್ಕೂಟದ ವೇತನ ಮಾದರಿ ಯನ್ನು ರಾಜ್ಯಾದ್ಯಂತ ವಿಸ್ತರಿಸಬೇಕು. ಶಾಲಾ ಮಕ್ಕಳು, ಅಂಗನವಾಡಿ ಕೇಂದ್ರಗಳ ಜತೆಗೆ ಕಡುಬಡತನ ಹಿನ್ನೆಲೆಯ ಕುಟುಂಬಗಳಿಗೂ ಸಬ್ಸಿಡಿ ದರದಲ್ಲಿ ಹಾಲು ಸರಬರಾಜು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT