ಜಿಲ್ಲಾ ಸುದ್ದಿ

ರಾಜ್ಯದ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದಿಂದ ಎಚ್ಚರಿಕೆ

Shilpa D

ಬೆಂಗಳೂರು: ರಾಜ್ಯ ಸರ್ಕಾರ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದ ಬೇಡಿಕೆ ಈಡೇರಿಸದಿದ್ದರೆ ಆಹೋರಾತ್ರಿ ಧರಣಿ ಕೈಗೊಳ್ಳಲಾಗುವುದು ಎಂದು ಸಂಘದ ನಿರ್ದೇಶಕ ರವಿಕುಮಾರ್ ಎಚ್ಚರಿಕೆ ನೀಡಿದರು.

ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ 5 ದಿನಗಳಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ 2300 ನೌಕರರು ಕೆಲಸ ಸ್ಥಗಿತಗೊಳಿಸಿ ಧರಣಿ ನಡೆಸುತ್ತಿದ್ದರೂ ಪ್ರತಿಭಟನಾ ಸ್ಥಳಕ್ಕೆ ಈವರೆಗೂ ಯಾವೊಬ್ಬ ಅಧಿಕಾರಿಗಳು ಭೇಟಿ ನೀಡಿಲ್ಲ. ಇದರಿಂದ 3 ಲಕ್ಷ ಏಡ್ಸ್
ರೋಗಿಗಳು ತೊಂದರೆಗೆ ಸಿಲುಕಿಕೊಂಡಿದ್ದಾರೆ. ನಮ್ಮ ಸಂಸ್ಥೆಯು ಕಳೆದ 13 ವರ್ಷದಿಂದ ರೋಗಿಗಳ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸೆ ನೀಡುವುದರ ಮೂಲಕ ದೇಶದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿದೆ ಎಂದು ಕೇಂದ್ರ ಸರ್ಕಾರವೇ ವರದಿ ಕೊಟ್ಟಿದೆ. ಆದರೆ, ಸರ್ಕಾರ ನಮಗೆ ಕಳೆದ 9 ತಿಂಗಳಿಂದ ಸಂಬಳ ಕೊಟ್ಟಿಲ್ಲ. ಹೀಗಾದರೆ ನಾವು ಜೀವನ ಮಾಡುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಕೂಡಲೇ ಆರೋಗ್ಯ ಇಲಾಖೆಗೆ ನಮ್ಮನ್ನು ವಿಲೀನಗೊಳಿಸಬೇಕು. ಹುದ್ದೆಗಳನ್ನು ಕಾಯಂಗೊಳಿಸಿ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ನೀಡಬೇಕು. ರಾಜ್ಯ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ನೀಡಬೇಕು. ಹಿರಿತನ  ಆಧಾರದ ಮೇಲೆ ಮುಂಬಡ್ತಿ ನೀಡಬೇಕು. ಈ ಹಿಂದೆ ಭರವಸೆ  ಕೊಟ್ಟು ಈಡೇರಿಸದೇ ಹಾಗೇ ಬಿಟ್ಟಿರುವ ಆರೋಗ್ಯ ಸಚಿವ ಯು.ಟಿ ಖಾದರ್ ಅವರು ನಮ್ಮೆಲ್ಲಾ  ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತೇನೆ ಎಂದು ಲಿಖಿತ ರೂಪದಲ್ಲಿ ಭರವಸೆ ಕೊಡಬೇಕು. ಸಮಸ್ಯೆ ಪರಿಹರಿಸದಿದ್ರೆ, ಅಹೋ ರಾತ್ರಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

SCROLL FOR NEXT