ಬೆಂಗಳೂರು: ಬೆಂಕಿಯ ಕೆನ್ನಾಲಿಗೆಗೆ ಬಿಎಂಟಿಸಿ ಬಸ್ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ನಗರದ ವೈಟ್ ಫೀಲ್ಡ್ ಬಳಿ ಬುಧವಾರ ನಡೆದಿದೆ.
ಕುಂದಲಹಳ್ಳಿಯಿಂದ ಕಾಡುಗೋಡಿಗೆ ತೆರಳುತ್ತಿದ್ದ ಕೆಎ 57, ಎಪ್ 1540 ಸಂಖ್ಯೆ ಬಸ್ ನಲ್ಲಿ, ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ವೈಟ್ ಫೀಲ್ಡ್ ನ ಐಟಿಪಿಎಲ್ ಮುಖ್ಯರಸ್ತೆಯಲ್ಲಿ ಧಗ-ಧಗ ಹೊತ್ತಿ ಹುರಿದಿದೆ.
ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಬಿಎಂಟಿಸಿ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅಪಾಯ ತಪ್ಪಿದಂತಾಗಿದೆ.