ಡಾ. ಅಪ್ಪಾಜಿಗೌಡ 
ಜಿಲ್ಲಾ ಸುದ್ದಿ

ಕೆಂಪೇಗೌಡ ಸಮಾಧಿ ಪ್ರವಾಸಿ ತಾಣವಾಗಿಸಿ: ಒಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ

ಸಮಾಜಕ್ಕೆ ತಿಳಿಸಲು ಹಾಗೂ ಅವರ ಸಮಾಧಿಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡುವ ಉದ್ದೇಶದಿಂದ ರಾಜ್ಯ ...

ಬೆಂಗಳೂರು: ಸಮಾಜಕ್ಕೆ ತಿಳಿಸಲು ಹಾಗೂ ಅವರ ಸಮಾಧಿಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡುವ ಉದ್ದೇಶದಿಂದ ರಾಜ್ಯ ಒಕ್ಕಲಿಗರ ಸಂಘದಿಂದ ನ.30ರಂದು ಮಾಗಡಿಯ ಕೋಟೆ ಮೈದಾನದಿಂದ ಕೆಂಪಾಪುರಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಅಪ್ಪಾಜಿಗೌಡ ತಿಳಿಸಿದರು.

`ಎಲ್ಲರ ನಡಿಗೆ ಕೆಂಪೇಗೌಡರ ಕಡೆಗೆ' ಶೀರ್ಷಿಕೆಯಡಿ ಕೆಂಪೇಗೌಡ ಸಮಾಧಿವರೆಗೆ ಪಾದಯಾತ್ರೆ ನಡೆಯಲಿದೆ. ಬೆಳಗ್ಗೆ 10ಕ್ಕೆ ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ನಂಜಾವಧೂತ ಸ್ವಾಮಿಗಳು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಸುಮಾರು 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಪರೂಪದ ಚಾರಿತ್ರಿಕ ವ್ಯಕ್ತಿತ್ವ ಹೊಂದಿದ್ದ ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ವಿಶ್ವದ ಗಮನ ಸೆಳೆಯುತ್ತಿರುವ ಬೆಂಗಳೂರು ನಿರ್ಮಾಣವಾಗಿದೆ. ಅವರ ಜನ ಕಲ್ಯಾಣ ಕಾರ್ಯಕ್ರಮಗಳು ಇಂದಿಗೂ ಆದರ್ಶಪ್ರಾಯವಾಗಿವೆ. ಸರ್ವ ಜನಾಂಗಕ್ಕೂ ಆಶ್ರಯ ನೀಡಿ, ವಿಶ್ವ ಪಥದ ಪರಿಕಲ್ಪನೆ ತೋರಿಸಿಕೊಟ್ಟಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT