ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಲೋಕಾಯುಕ್ತ ಎಸ್‍ಐಟಿ ಬಂಧನದಲ್ಲಿರುವ ಮಾಜಿ ಸಚಿವ ಜನಾರ್ದನರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
ಬುಧವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧಿೀಶ ವಿ.ಜಿ. ಬೋಪಯ್ಯ ನ. 30ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿದ್ದಾರೆ.
ರೆಡ್ಡಿ ಅವರ ವಿರುದ್ಧ ದಾಖಲಾಗಿರುವ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸ ಬೇಕು ಎಂದು ಎಸ್‍ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಜನಾರ್ದನರೆಡ್ಡಿ ಪರ ವಕೀಲ ರು ಆಕ್ಷೇಪ ವ್ಯಕ್ತಪಡಿಸಿದರು. ನಂತರ ಮನವಿ ತಿರಸ್ಕರಿಸಿ, ಡಿ. 3ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.
ಪ್ರಕರಣದ ಹಿನ್ನೆಲೆ: ಬ್ಲಾಕ್ ಗೋಲ್ಡ್ ಮೈನ್ಸ್ ಕಂಪನಿ ಹೆಸರಲ್ಲಿ ಅಕ್ರಮಗಣಿಗಾರಿಕೆ ಮತ್ತು ಅದಿರು ರಫ್ತು ಆರೋಪದ ಮೇಲೆ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿ, ಲೋಕಾಯುಕ್ತ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.