ಜಿಲ್ಲಾ ಸುದ್ದಿ

ಮೇಯರ್ ಚುನಾವಣೆಯಲ್ಲಿ ಸಂಸದರು, ಶಾಸಕರಿಗೆ ಮತಾಧಿಕಾರ ಇದೆ: ಹೈಕೋರ್ಟ್

Lingaraj Badiger

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸುವ ಅಧಿಕಾರ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಇದೆ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಶುಕ್ರವಾರ ತೀರ್ಪು ನೀಡಿದೆ.

ಬಿಬಿಎಂಪಿ ಮೇಯರ್, ಉಪ ಮೇಯರ್ ಆಯ್ಕೆ ಚುನಾವಣೆಯಲ್ಲಿ ಶಾಸಕರ, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಮತದಾನದ ಹಕ್ಕು ನೀಡಿರುವುದನ್ನು ಪ್ರಶ್ನಿಸಿ ಬಿಜೆಪಿಯ ಕೆಲವು ಸದಸ್ಯರು ಹೈಕೋರ್ಟ್ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಚೌಹಾಣ್ ಅವರು, ಮತಾಧಿಕಾರ ಇದೆ ಎಂದು ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆ ಸ್ಥಳೀಯ ಚುನಾವಣೆ ವ್ಯಾಪ್ತಿಗೆ ಒಳಪಡಲಿದ್ದು, ಮೇಯರ್ ಹಾಗೂ ಉಪ ಮೇಯರ್ ಆಯ್ಕೆಯಲ್ಲಿ ಪಾಲಿಕೆ ಚುನಾವಣೆಯಲ್ಲಿ ಜಯ ಸಾಧಿಸಿದ ಅಭ್ಯರ್ಥಿಗಳು ಮಾತ್ರ ಮತ ಚಲಾಯಿಸುವಂತೆ ನಿರ್ದೇಶಿಸಬೇಕು ಹಾಗೂ ಅರ್ಜಿ ಇತ್ಯರ್ಥ ಆಗುವವರೆಗೂ ಮೇಯರ್, ಉಪ ಮೇಯರ್ ಚುನಾವಣೆಗೆ ತಡೆ ನೀಡಬೇಕೆಂದು ಕೋರಿ ಪಾಲಿಕೆ ಬಿಜೆಪಿ ಸದಸ್ಯೆ ಪ್ರಮೀಳಾ ಸೇರಿ ಐವರು ತಕರಾರು ಅರ್ಜಿ ದಾಖಲಿಸಿದ್ದರು.

SCROLL FOR NEXT