ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಅನುಮಾನಾಸ್ಪದವಾಗಿ ಮೃತಪಟ್ಟ ವೃದ್ಧೆ

ರಾಜಗೋಪಾಲನಗರದ ಕೆಂಪೇಗೌಡ ಲೇಔಟ್‍ನಲ್ಲಿ 85 ವರ್ಷದ ಮಹಿಳೆ ಚೊಟಿಯಮ್ಮ ಎಂಬುವರು...

ಬೆಂಗಳೂರು: ರಾಜಗೋಪಾಲನಗರದ ಕೆಂಪೇಗೌಡ ಲೇಔಟ್‍ನಲ್ಲಿ 85 ವರ್ಷದ ಮಹಿಳೆ ಚೊಟಿಯಮ್ಮ ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

ಸಣ್ಣ ಮನೆಯೊಂದರಲ್ಲಿ ಒಂಟಿಯಾಗಿ ಚೊಟಿಯಮ್ಮ ನೆಲೆಸಿದ್ದರು. ಇವರಿಗೆ ಐವರು ಮಕ್ಕಳಿದ್ದು ನಗರದ ವಿವಿಧ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಆಗಾಗ ತಾಯಿ ಮನೆಗೆ ಬರುತ್ತಿದ್ದ
ಮಕ್ಕಳು, ಆಕೆಯ ಜೀವನಕ್ಕೆ ಬೇಕಾಗುವ ಅಗತ್ಯ ವಸ್ತುಗಳನ್ನು ನೀಡಿ ಹೋಗುತ್ತಿದ್ದರು.

ಶುಕ್ರವಾರ ರಾತ್ರಿ ಪುತ್ರ ಇಮ್ತಿಯಾಜ್ ಬಂದಿದ್ದ. ಈ ವೇಳೆ ತಾಯಿ ಮಗನ ನಡುವೆ ಮಾತಿನ ಚಕಮಕಿ ನಡೆದಿದ್ದು ಬಳಿಕ ಇಮ್ತಿಯಾಜ್ ಹೊರಟು ಹೋಗಿದ್ದ. ಮನೆ ಬಾಗಿಲು ತೆಗೆದಿದ್ದ ಕಾರಣ ನೆರೆಮನೆಯವರು ಒಳಗೆ ಹೋದಾಗ, ಚೊಟಿಯಮ್ಮ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಮುಖಕ್ಕೆ ನೀರು ಚಿಮುಕಿಸಿದಾಗ ಪ್ರತಿಕ್ರಿಯೆ ಬಾರದ ಕಾರಣ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆಂದು ಹೇಳಿದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಆಕೆಯ ಮಗನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT