(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಗುತ್ತಿಗೆ ಬಿಲ್ ಪಾವತಿಸದೆ ವಂಚನೆ

ನ್ಯಾಯಾಲಯದ ಆದೇಶ ಉಲ್ಲಂಘಿಸಿ ಜ್ಯೇಷ್ಠತೆ ಆಧಾರದಲ್ಲಿ ಕಾಮಗಾರಿಗಳ ಬಿಲ್ ಪಾವತಿಸದೆ ಗುತ್ತಿಗೆದಾರರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಬಹೃತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಆರೋಪಿಸಿದರು...

ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಜ್ಯೇಷ್ಠತೆ ಆಧಾರದಲ್ಲಿ ಕಾಮಗಾರಿಗಳ ಬಿಲ್ ಪಾವತಿಸದೆ ಗುತ್ತಿಗೆದಾರರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಬಹೃತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶ ಕಡೆಗಣಿಸಿ ಪಾಲಿಕೆ ನೂತನ ಟೆಂಡರ್ ಕರೆಯುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿರುವ ಹಳೆ ಕಾಮಗಾರಿಗಳ ಬಾಕಿ ಬಿಲ್‍ಗಳನ್ನು ಪಾವತಿಸಿದ ನಂತರವಷ್ಟೇ ಹೊಸ ಕಾಮಗಾರಿಗಳಿಗೆ ಟೆಂಡರ್ ಕರೆಯಬೇಕು ಎಂದು ಒತ್ತಾಯಿಸಿದರು. ಕಳೆದ 2013ರ ಅಕ್ಟೋಬರ್‍ನಿಂದ 2014ರ ಮಾರ್ಚ್‍ವರೆಗೆ ಕೇವಲ ಶೇ.20 ರಷ್ಟು ಮಾತ್ರ ಹಣ ಬಿಡುಗಡೆ ಮಾಡಲಾಗಿದೆ. ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಳೆದ 2 ವರ್ಷಗಳಿಂದ ಸುಮಾರು ಒಂದೂವರೆ ಸಾವಿರ ಕೋಟಿ ರೂ.ಬಾಕಿ ಇದೆ. ಈ ಬಗ್ಗೆ ಸಂಬಂಧಿಸಿದವರಿಗೆ ಮನವಿ ಕೊಟ್ಟರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಾಗಲಿ ಗಮನಹರಿಸುತ್ತಿಲ್ಲ. ಶೀಘ್ರವೇ ಬಿಲ್ ಬಿಡುಗಡೆ ಮಾಡದಿದ್ದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಟಿ.ವೆಂಕಟೇಶ್ ಮಾತನಾಡಿ, ರಾಜ್ಯ ಸರ್ಕಾರ ಗುತ್ತಿಗೆದಾರರ ನೆರವಿಗೆ ಬಂದು ಬಿಬಿಎಂಪಿಯಿಂದ ಎಲ್‍ಒಸಿ ಹಣ ಬಿಡುಗಡೆಗೊಳಿಸಬೇಕು. ಇಲ್ಲವೇ ಆರ್ಥಿಕ ಸಂಕಷ್ಟದಲ್ಲಿರುವ ಗುತ್ತಿಗೆದಾರರ ಆತ್ಮಹತ್ಯೆಗೆ ಸರ್ಕಾರವೇ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನಗಳಿಗೆ ಪಿ.ಕೋಡ್ ಬಳಸಿ
ಹಣ ಬಿಡುಗಡೆ ಮಾಡಬೇಕು. ಆದರೆ ಪಾಲಿಕೆ ಅನುದಾನದಲ್ಲಿ ನಡೆದ ಕಾಮಗಾರಿಗೆ ಸುಮಾರು ರು.100 ಕೋಟಿಗೂ ಹೆಚ್ಚಿನ ಹಣವನ್ನು ಪಿ.ಕೋಡ್ ಬಳಸಿ ಅಕ್ರಮವಾಗಿ ಪಾವತಿಸಿದ್ದಾರೆ.

ಇದರಲ್ಲಿ ಭಾರೀ ಅವ್ಯವಹಾರ ನಡೆದಿದೆ. ಹೀಗಾಗಿ ಈ ಅಕ್ರಮ ವಿರುದ್ಧ ಸೂಕ್ತ ತನಿಖೆಯಾಗಬೇಕು ಒತ್ತಾಯಿಸಿದರು. ಸಂಘದ ಸಂಚಾಲಕರಾದ ಎಂ. ಕೃಷ್ಣಮೂರ್ತಿ, ಮಂಜುನಾಥ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ