(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಪಾಲಿಕೆ ಕೌನ್ಸಿಲ್ ಸಭೆ ಮುಂದೂಡಿಕೆ

ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಕೌನ್ಸಿಲ್ ಸಭೆಯನ್ನು ಮುಂದೂಡಲಾಯಿತು...

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಕೌನ್ಸಿಲ್ ಸಭೆಯನ್ನು ಮುಂದೂಡಲಾಯಿತು.

ಸೋಮವಾರ ನಡೆದ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ, ಶಾಸಕ ಜಗದೀಶ್ ಕುಮಾರ್, ಹಿರಿಯ ಐಎಎಸ್ ಅಧಿಕಾರಿ ಸತ್ಯಮೂರ್ತಿ ಅವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಸಭೆ ಮುಂದೂಡಿರುವು ದಾಗಿ ಮೇಯರ್ ಬಿ.ಎನ್. ಮಂಜುನಾಥ ರೆಡ್ಡಿ ತಿಳಿಸಿದರು.

ಮೊದಲಿಗೆ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ಅವರು ಗುರುಪಾದಪ್ಪ ನಾಗಮಾರಪಲ್ಲಿ, ಜಗದೀಶ್ ಕುಮಾರ್ ಹಾಗೂ ಸತ್ಯಮೂರ್ತಿ ಅವರ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇವರ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ. ಕುಟುಂಬದವರಿಗೆ ಅವರ ಸಾವಿನ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು. ಬಳಿಕ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಸತ್ಯನಾರಾಯಣ, ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಅನೇಕರು ಸಂತಾಪ ಸೂಚಿಸಿದರು.

ಗದ್ದಲಕ್ಕೆ ಕಾರಣವಾದ ಟಿಪ್ಪು: ಸಭೆಯಲ್ಲಿ ಮೇಯರ್ ತಮ್ಮ ಸ್ಥಾನದಲ್ಲಿ ಕೂರುತ್ತಿದ್ದಂತೆ, ಕಾಂಗ್ರೆಸ್‍ನ ಸಂಪತ್ ರಾಜ್ ಅವರು ಟಿಪ್ಪು ಜಯಂತಿ ಆಚರಿಸಿದ್ದಕ್ಕೆ ಮುಖ್ಯಮಂತ್ರಿಗಳು ಹಾಗೂ ಮೇಯರ್‍ಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಬಿಜೆಪಿಯ ಅನೇಕ ಸದಸ್ಯರು `ಸಭೆ ಆರಂಭದಲ್ಲೇ ಈ ರೀತಿ ವಿವಾದ ಸೃಷ್ಟಿಸುವುದು ಸರಿಯಲ್ಲ' ಎಂದು ಖಂಡಿಸಿದರು. ಸಭೆಗೆ ಗೌರವ ಕೊಡದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸಂಪತ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಸಭೆ ಆರಂಭದಲ್ಲೇ ಗದ್ದಲ ಉಂಟಾಯಿತು. ಮಧ್ಯ ಪ್ರವೇಶಿಸಿದ ಮೇಯರ್ ಪರಿಸ್ಥಿತಿ ತಿಳಿಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT