ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ 
ಜಿಲ್ಲಾ ಸುದ್ದಿ

ತಿಂಗಳಲ್ಲಿ ಜಾತಿ ಗಣತಿ ಅಂತಿಮ ವರದಿ ಸಲ್ಲಿಕೆ: ಎಚ್. ಆಂಜನೇಯ

ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ಅಂತಿಮ ವರದಿಯನ್ನು ಇನ್ನೆರಡು ತಿಂಗಳಲ್ಲಿ ಪ್ರಕಟಿಸಲಾಗುವುದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ಅಂತಿಮ ವರದಿಯನ್ನು ಇನ್ನೆರಡು ತಿಂಗಳಲ್ಲಿ ಪ್ರಕಟಿಸಲಾಗುವುದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದ್ದಾರೆ.

ರಾಜ್ಯದಲ್ಲಿ ನಾಲ್ಕು ತಿಂಗಳ ಹಿಂದೆ ನಡೆಸಲಾಗಿರುವ ಈ ಸಮೀಕ್ಷೆಯ ಪೂರ್ಣವಿವರ ಲಭ್ಯವಾಗಿದೆ. ಇದನ್ನು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳು ಪರಿಶೀಲನೆ ಮತ್ತು ಪರಿಷ್ಕರಣೆ ನಡೆಸುತ್ತಿದ್ದಾರೆ. ಇದೆಲ್ಲ ಇನ್ನೆರಡು ತಿಂಗಳಲ್ಲಿ ಪೂರ್ಣವಾಗಲಿದೆ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು. 1931ರ ನಂತರ ರಾಜ್ಯದಲ್ಲಿ ಪ್ರಥಮ ಬಾರಿಗೆ ಇಂಥ ಸಮೀಕ್ಷೆ ನಡೆಸಲಾಗಿದ್ದು, ಇದು ಅತ್ಯಂತ ಸ್ಪಷ್ಟವಾಗಿ, ನ್ಯಾಯ ಸಮ್ಮತವಾಗಿ ಸಿದ್ಧವಾಗಲಿ ಎಂಬ ಕಾರಣಕ್ಕೆ ಪರಿಶೀಲನೆ ನಡೆಸಲಾಗುತ್ತಿದೆ.

ಹಾಗೆಯೇ ಬಿಟ್ಟು ಹೋಗಿರುವ ಪ್ರದೇಶಗಳಲ್ಲಿ ಪುನರ್ ಸಮೀಕ್ಷೆ ನಡೆಸಬೇಕಿದೆ. ಮತ್ತು ಅನುಮಾನ ಇರುವ ಭಾಗದಲ್ಲೂ ಮತ್ತೆ ಸಮೀಕ್ಷೆ ನಡೆಸಲಾಗುತ್ತದೆ. ಏಕೆಂದರೆ, ಸಮೀಕ್ಷೆ ಸಂದರ್ಭದಲ್ಲಿ ಕೆಲವರು ಮನೆಯಲ್ಲಿರಲಿಲ್ಲ. ಬಾಗಿಲನ್ನೇ ತೆಗೆದಿಲ್ಲ. ಮಾಹಿತಿ ನೀಡುವುದಕ್ಕೇ ಮುಂದಾಗಿಲ್ಲ. ಆದ್ದರಿಂದ ತಾಲೂಕಿಗೆ ಒಂದು ಬ್ಲಾಕ್‍ನಂತೆ ಆಯ್ಕೆ ಮಾಡಿ ಪುನರ್ ಸಮೀಕ್ಷೆ ನಡೆಸಲಾಗುವುದು. ಅಂತಿಮವಾಗಿ ಸಮೀಕ್ಷೆ ವರದಿ ಸಿದ್ಧವಾಗುತ್ತಿದ್ದಂತೆ ಸಾರ್ವಜನಿಕವಾಗಿ ಪ್ರಕಟಿಸಲಾಗುತ್ತದೆ ಎಂದರು. ಹಾಸ್ಟೆಲ್‍ಗಳಲ್ಲಿ ಮಾಂಸ, ಮೊಟ್ಟೆ ಊಟ: ಪರಿಶಿಷ್ಟಜಾತಿ, ಪಂಗಡ ಮತ್ತು ಹಿಂದುಳಿದ ಹಾಸ್ಟೆಲ್‍ಗಳಲ್ಲಿ ವಾರಕ್ಕೊಮ್ಮೆ ಕೋಳಿ ಮಾಂಸದ ಊಟ ಮತ್ತು ಮೊಟ್ಟೆ ನೀಡಲಾಗುವುದು ಎಂದು ಸಚಿವ ಆಂಜನೇಯ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!