(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಪತಿ ಸಾವಿಗೆ ಕಾರಣ ಆಯ್ತು ಪತ್ನಿ ಆತ್ಮಹತ್ಯೆ

ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಪತಿಯು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿವಾಳ ಸಮೀಪದ ಹೊಂಗಸಂದ್ರದಲ್ಲಿ ಶುಕ್ರವಾರ ನಡೆದಿದೆ...

ಬೆಂಗಳೂರು: ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಪತಿಯು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮಡಿವಾಳ ಸಮೀಪದ ಹೊಂಗಸಂದ್ರದಲ್ಲಿ ಶುಕ್ರವಾರ ನಡೆದಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣದ ಬಸನಹಳ್ಳಿ ಗ್ರಾಮದ ಮಂಗಳಮ್ಮ (32) ಹಾಗೂ ಅವರ ಪತಿ ಬಸವಲಿಂಗಪ್ಪ (38) ಆತ್ಮಹತ್ಯೆಗೆ ಶರಣಾದ ದಂಪತಿ, ಚೆನ್ನಪಟ್ಟಣದಲ್ಲಿದ್ದ ಪತ್ನಿ ಮಂಗಳಮ್ಮ ಶುಕ್ರವಾರ ಸಂಜೆ ನಿದ್ರೆ ಮಾತ್ರೆಸ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಸಾವಿಗೀಡಾದರು. ಆಗ ಬೆಂಗಳೂರಿನಲ್ಲಿದ್ದ ಪತಿ ಬಸವಲಿಂಗಪ್ಪ ಅರಿಗೆ ಕರೆ ಮಾಡಿದ ಸಂಬಂಧಿಕರು, ಮಂಗಳಮ್ಮ ಮೃತಪಟ್ಟಿರುವ ವಿಷಯ ತಿಳಿಸಿದ್ದರು.

ಇದನ್ನು ಕೇಳಿದ ಪತಿ ಹೊಂಗಸಂದ್ರದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಕೃಷಿಗಾಗಿ ಬಸವಲಿಂಗಪ್ಪ ರು.4 ಲಕ್ಷ ಸಾಲ ಮಾಡಿಕೊಂಡಿದ್ದರು. ಬೆಳೆ ಕೈಕೊಟ್ಟಿದ್ದರಿಂದ ಆರ್ಥಿಕ ಸಂಕಷ್ಟ ಉಂಟಾಗಿತ್ತು. ಸಾಲ ಕೊಟ್ಟವರು ಮನೆಗೆ ಬಂದು ಕೇಳಲಾರಂಭಿಸಿದರು. ಬ್ಯಾಂಕ್‍ಗಳಿಂದಲೂ ನೋಟಿಸ್‍ಗಳು ಬಂದವು ಎಂದು ಮೃತರ ಸಂಬಂಧಿಕರು ಹೇಳಿದ್ದಾರೆಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!