ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ 
ಜಿಲ್ಲಾ ಸುದ್ದಿ

ಬೆಂಗಳೂರಲ್ಲಿ ಗ್ಯಾಂಗ್ ರೇಪ್: ಇಬ್ಬರ ಬಂಧನ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 22 ವರ್ಷದ ಬಿಪಿಒ ಉದ್ಯೋಗಿಯ ಮೇಲೆ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 22 ವರ್ಷದ ಬಿಪಿಒ ಉದ್ಯೋಗಿಯ ಮೇಲೆ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ತಿಳಿಸಿದ್ದಾರೆ.

ಯೋಗೇಶ್ ಮತ್ತು ಸತೀಶ್ ಎಂದು ಗುರುತಿಸಲಾಗಿದ್ದು, ಆರೋಪಿಗಳನ್ನು ಟಿಟಿ ವಾಹನ ಪತ್ತೆ ಹಚ್ಚಿ ಬಂಧಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನವರು,ಅವರು ಟಿಟಿ ಚಾಲಕ ಮತ್ತು ಕ್ಲೀನರ್ ಎಂದು ತಿಳಿದು ಬಂದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಹೇಳಿದ್ದಾರೆ.

ಅತ್ಯಾಚಾರಕ್ಕೊಳಗಾದ ಯುವತಿಗೆ ನಗರದ ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ದುಷ್ಕೃತ್ಯಕ್ಕೆ ಬಳಸಿರುವ ವಾಹನವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವಶಕ್ಕೆ ಪಡೆದಿರುವ ವಾಹನ ಕೆಎ 03 ಬಿ 1863 ಸಂಖ್ಯೆಯ ದ್ದಾಗಿದ್ದು, ಶಂಕರ್‌ .ಎಲ್‌ ಎನ್ನುವವರಿಗೆ ಸೇರಿದ ವಾಹನ ಇದಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಬೆಂಗಳೂರಿನ ಮಡಿವಾಳ ಜಂಕ್ಷನ್ ನಲ್ಲಿ ಯುವತಿ ಮೊನ್ನೆ ಶನಿವಾರ ಕಚೇರಿಯಿಂದ ಕೆಲಸ ಮುಗಿಸಿಕೊಂಡು ತಾನು ವಾಸ್ತವ್ಯ ಹೂಡಿರುವ ಪಿಜಿಗೆ ತೆರಳಲು ಕಾಯುತ್ತಿದ್ದ ವೇಳೆ ವ್ಯಾನ್ ನಲ್ಲಿ ಬಂದ ಇಬ್ಬರು ಎಲ್ಲಿಗೆ ಹೋಗಬೇಕೆಂದು ಕೇಳಿ ಯುವತಿಯನ್ನು ಹತ್ತಿಸಿಕೊಂಡಿದ್ದಾರೆ.

ಸ್ವಲ್ಪ ದೂರ ಹೋದ ನಂತರ ಚಾಕು ತೋರಿಸಿ ಬೆದರಿಕೆ ಹಾಕಿ ದೊಮ್ಮಲೂರು ಹತ್ತಿರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ನಂತರ ಯುವತಿಯನ್ನು ಮಡಿವಾಳ ಜಂಕ್ಷನ್ ಗೆ ಕರೆತಂದು ಬಿಟ್ಟು ಓಡಿ ಹೋಗಿದ್ದಾರೆ.ಅಲ್ಲಿಂದ ಸ್ನೇಹಿತರಿಗೆ ಕರೆ ಮಾಡಿದ ಯುವತಿ ಪೊಲೀಸರ ನೆರವಿನಿಂದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ನಿನ್ನೆಯಷ್ಟೇ ಬಿಡುಗಡೆ ಹೊಂದಿದ್ದಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel