ಟಾಟಾ ಮ್ಯಾಜಿಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಮಗು ಸೇರಿ 6 ಸಾವು
ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದ ಬಳಿ ಟಾಟಾ ಮ್ಯಾಜಿಕ್ ವಾಹನ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ ಬಸ್ ನಡುವೆ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದ ಬಳಿ ಟಾಟಾ ಮ್ಯಾಜಿಕ್ ವಾಹನ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 20 ದಿನದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ ಬಾಗಲಕೋಟೆಯಿಂದ ವಾಪಸ್ ಬರುತ್ತಿದ್ದ ಟಾಟಾ ಮ್ಯಾಜಿಕ್‌ಗೆ ಮುದ್ದೇಬಿಹಾಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಸಿದೆ. ಅಪಘಾತದ ತೀವ್ರತೆಗೆ ಟಾಟಾ ಮ್ಯಾಜಿಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರನ್ನು ಟಾಟಾ ಮ್ಯಾಜಿಕ್ ಚಾಲಕ ಮಂಜಪ್ಪ(24), 20 ದಿನದ ಮಗು ಅಪ್ಪಣ್ಣ, ಬಾಣಂತಿ ವೆಂಕವ್ವ(25) ಅತ್ತೆ ಯಲ್ಲವ್ವ(60), ಪಾರ್ವತೆವ್ವ(65) ಹಾಗೂ ರಾಮಣ್ಣ(25) ಎಂದು ಗುರುತಿಸಲಾಗಿದೆ.
ಮೃತರ ಪೈಕಿ ಐವರು ಬೈರಮಟ್ಟಿ ಗ್ರಾಮದ ನಿವಾಸಿಗಳಾಗಿದ್ದು, ಮತ್ತೊಬ್ಬ ಮಹಿಳೆ ಹಳ್ಳೂರು ಗ್ರಾಮದ ನಿವಾಸಿ ಎನ್ನಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.