ವಾರ್ತಾ ಸಚಿವ ರೋಷನ್ ಬೇಗ್ 
ಜಿಲ್ಲಾ ಸುದ್ದಿ

ಮಾನ್ಯತಾ ಟೆಕ್‍ಪಾರ್ಕ್ ವಿರುದ್ಧ ಕ್ರಿಮಿನಲ್ ಕೇಸು

ಬಾಲಕ ಪ್ರಕಾಶ್ ರಾಜಕಾಲುವೆಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯತಾ ಟೆಕ್ ಪಾರ್ಕ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ವಾರ್ತಾ ಸಚಿವ ರೋಷನ್ ಬೇಗ್ ಹೇಳಿದ್ದಾರೆ...

ಬೆಂಗಳೂರು: ಬಾಲಕ ಪ್ರಕಾಶ್ ರಾಜಕಾಲುವೆಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯತಾ ಟೆಕ್ ಪಾರ್ಕ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ವಾರ್ತಾ ಸಚಿವ ರೋಷನ್ ಬೇಗ್ ಹೇಳಿದ್ದಾರೆ.

ಬಾಲಕ ಪ್ರಕಾಶ್ ರಾಜಕಾಲುವೆಗೆ ಬಲಿಯಾಗಿರುವ ಸ್ಥಳದಲ್ಲಿ ಮಾನ್ಯತಾ ಟೆಕ್ ಪಾರ್ಕ್ ಸಂಸ್ಥೆಯವರು ರಾಜಕಾಲುವೆಯನ್ನು ಒತ್ತುವರಿ ಮಾಡಿದ್ದಾರೆ. ಅಲ್ಲಿ ಪೈಪ್‍ಗಳನ್ನು ಜೋಡಿಸಿ ಮಳೆ ನೀರು ಸರಾಗವಾಗಿ ಹರಿಯದಂತೆ ಮಾಡಿದ್ದಾರೆ. ಹೀಗಾಗಿ ಸಂಸ್ಥೆ ವಿರುದಟಛಿ ಕ್ರಿಮಿನಲ್ ಕೇಸು ದಾಖಲಿಸುವಂತೆ ಸೂಚಿಸಲಾಗಿದೆ ಎಂದರು. ವಸಂತನಗರದಲ್ಲಿ ಗುರುವಾರ ಏರ್ಪಡಿಸಿದ್ದ ಬಿಬಿಎಂಪಿಯ ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಮೃತ ಬಾಲಕನ ಕುಟುಂಬಕ್ಕೆ ಮಾನ್ಯತಾ ಟೆಕ್ ಪಾರ್ಕ್ ಸಂಸ್ಥೆಯಿಂದಲೇ ಪರಿಹಾರ ದೊರಕಿಸುವಂತೆ ಸೂಚಿಸಲಾಗಿದ್ದು, ಜತೆಗೆ ಬಿಬಿಎಂಪಿಯಿಂದಲೂ ಪರಿಹಾರ ದೊರೆಯುವಂತೆ ಮಾಡಲಾಗುತ್ತಿದೆ. ಹಾಗೆಯೇ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ತೀವ್ರಗೊಳಿಸಬೇಕೆಂದೂ ಸೂಚಿಸಲಾಗಿದೆ. ನಗರದ ಚರಂಡಿಗಳು ತೆರೆದುಕೊಂಡಿದ್ದು, ತೊಂದರೆಯಾಗುತ್ತಿದ್ದರೆ, ಅವುಗಳನ್ನು ದುರಸ್ತಿ ಮಾಡಿ ಪಾದಚಾರಿಗಳಿಗೆ ಅನುಕೂಲ ಮಾಡುವಂತೆ ಹೇಳಲಾಗುವುದು ಎಂದು ರೋಷನ್ ಬೇಗ್ ವಿವರಿಸಿದರು.

ಇದಕ್ಕೂ ಮುನ್ನ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಶಿವಾಜಿನಗರ ಕ್ಷೇತ್ರ ವ್ಯಾಪ್ತಿಯ ಮೌಂಟ್ ಕಾರ್ಮೆಲ್ ಕಾಲೇಜಿನಿಂದ ದಂಡು ಪ್ರದೇಶದವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಶೀಘ್ರವೇ ದುರಸ್ತಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಮಾತನಾಡಿ, ಸರ್ಕಾರ ಟೆಂಡರ್ ಶ್ಯೂರ್
ಯೋಜನೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ