ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಹಂತಕರ ಬಂಧನಕ್ಕೆ ಆಗ್ರಹಿಸಿ ಬೃಹತ್ ರ್ಯಾಲಿ

ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರನ್ನು ಅಮಾನುಷವಾಗಿ ಗುಂಡಿಟ್ಟು ಹತ್ಯೆ ಮಾಡಿದ್ದು ನಾಡಿನ ಸತ್ಯ...

ಗದಗ: ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರನ್ನು ಅಮಾನುಷವಾಗಿ ಗುಂಡಿಟ್ಟು ಹತ್ಯೆ ಮಾಡಿದ್ದು ನಾಡಿನ ಸತ್ಯ, ಸಂಸ್ಕೃತಿ, ನಾಗರಿಕತೆ ಮತ್ತು ಪ್ರಗತಿಪರರ ಪರಂಪರೆಯ ಹತ್ಯೆಯಾಗಿದೆ ಎಂದು ಗದಗ ತೋಂಟದಾರ್ಯ ಮಠದ ಜಗದ್ಗುರು ಡಾ. ಸಿದ್ಧಲಿಂಗ ಸ್ವಾಮೀಜಿ ವಿಷಾದಿಸಿದರು. ಅವರು ಗುರುವಾರ ನಗರದ ಮುನ್ಸಿಪಲ್ ಕಾಲೇಜಿನ ಆವರಣದಲ್ಲಿ `ಡಾ. ಎಂ.ಎಂ. ಕಲಬುರ್ಗಿ ಹತ್ಯಾ ವಿರೋಧಿ ಹೋರಾಟ ವೇದಿಕೆ' ಮತ್ತಿತರ ಪ್ರಗತಿಪರ ಸಂಘಟನೆಗಳು ಮತ್ತು ಜಿಲ್ಲಾ ಸಾಹಿತಿಗಳು ಡಾ. ಕಲಬುರ್ಗಿ ಹತ್ಯೆ ವಿರೋಧಿಸಿ ಹಮ್ಮಿಕೊಂಡಿದ್ದ ಬೃಹತ್ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು. 
ಡಾ. ಕಲಬುರ್ಗಿ ಅವರ ವಿಚಾರ, ಧೋರಣೆಗಳನ್ನೇ ವಿರೋಧಿಸುವ ಕೆಲವರು ಈ ರೀತಿ ಆಕ್ರೋಶ ಹೊರಹಾಕಿದ್ದಾರೆ. ಶಾಂತ ಸರೋವರದಲ್ಲಿ ಕಲ್ಲೆಸೆದಂತಾಗಿದೆ. ಈ ಹತ್ಯೆ ಇಡೀ ಮಾನವೀಯತೆ ಅಣಕಿಸುವಂತೆ ಮಾಡಿದೆ. ಸತ್ಯವನ್ನು ಧೈರ್ಯವಾಗಿ ಹೇಳುವುದೇ ತಪ್ಪೇನೋ ಎನ್ನುವಂತಾಗಿದೆ ಎಂದು ಶ್ರೀಗಳು ಕಳವಳ ವ್ಯಕ್ತಪಡಿಸಿದರು. ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ ಮಾತನಾಡಿ, ಡಾ. ಕಲಬುರ್ಗಿಯವರ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಎಲ್ಲ ಪ್ರಗತಿಪರ ಸಂಘಟನೆ, ನಾನಾ ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಕಣ್ಣು ತೆರೆಸಿದ್ದಾರೆ. 
ಆದರೆ, ಇಲ್ಲಿವರೆಗೆ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇನ್ನು ಕೆಲವು ಸಂಘಟನೆಗಳ ಪ್ರಮುಖರು ಅಂತರ್ಜಾಲದಲ್ಲಿ ಡಾ. ಕಲಬುರ್ಗಿ ಹತ್ಯೆ ಸಮರ್ಥಿಸಿಕೊಳ್ಳುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. 
ಕೊಪ್ಪಳದ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಮಾತನಾಡಿ, ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಮೋಲ್ಕರ್, ಗೋವಿಂದ ಪಾನ್ಸರೆ ಅವರನ್ನು ಹತ್ಯೆ ಮಾಡಿದವರನ್ನು ಬಂಧಿಸಿದ್ದರೆ ಕಲಬುರ್ಗಿ ಅವರ ಹತ್ಯೆ ನಡೆಯುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್