ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ದಾಖಲಿಸಿ ದ್ದ ಅತ್ಯಾಚಾರ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಈ ಪ್ರಕ್ರಿಯೆ ಅನ್ವಯ ಆರೋಪಿಯಾಗಿರುವ ರಾಘವೇಶ್ವರ ಸ್ವಾಮೀಜಿ ಅ.9ರಂದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಎಸಿಎಂಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಇತ್ತೀಚೆಗಷ್ಟೇ ಸಿಐಡಿ ಅಧಿಕಾರಿಗಳು ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಬೇಕಿರುವು ದರಿಂದ ನಿರೀಕ್ಷಣಾ ಜಾಮೀನಿನಲ್ಲಿರುವ ಆರೋಪಿ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕ್ರಿಯೆಗಳನ್ನು ಪೂರೈಸಬೇಕು. ಅದಾದ ನಂತರ ಪ್ರಕರಣವನ್ನು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗುತ್ತದೆ.
ಅರ್ಜಿ ವಿಚಾರಣೆ ಮುಂದೂಡಿಕೆ: ವೈದ್ಯ ಪರೀಕ್ಷೆಗೆ ಹಾಜರಾಗದೆ ಜಾಮೀನು ಷರತ್ತು ಉಲ್ಲಂŒಸಿದ ರಾಘವೇಶ್ವರ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಬೇಕೆಂದು ಕೋರಿ ಸಿಐಡಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುಂದಿನ ವಿಚಾರಣೆಯನ್ನು ಅ.16ಕ್ಕೆ ಮುಂದೂಡಿದೆ.
ಸೆ.30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಸ್ವಾಮೀಜಿಗೆ ನೋಟಿಸ್ ನೀಡಿದ್ದರು. ಅಂತಿಮವಾಗಿ ಸ್ವಾಮೀಜಿಗೆ ಪರೀಕ್ಷೆಗೆ ಹಾಜರಾಗಿರಲಿಲ್ಲ. ಈ ಮೂಲಕ ಸ್ವಾಮೀಜಿ ತನಿಖೆಗೆ¸ ಹೀಗಾಗಿ, ಅವರಿಗೆ ಮಂಜೂರು ಮಾಡಿರುವ ಜಾಮೀನು ರದ್ದುಗೊಳಿಸಬೇಕೆಂದು ಸಿಐಡಿ ಪರ ಸರ್ಕಾರಿ ವಕೀಲರು ಅರ್ಜಿ ಸಲ್ಲಿಸಿದ್ದಾರೆ.