ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮಲ್ಲಿಕಾ ಘಂಟಿ(ಚಿತ್ರ ಕೃಪೆ: ಫೇಸ್ ಬುಕ್) 
ಜಿಲ್ಲಾ ಸುದ್ದಿ

ಪ್ರೊ.ಮಲ್ಲಿಕಾ ಘಂಟಿಗೆ ಜೀವ ಬೆದರಿಕೆ; ನಾಲ್ವರ ವಿರುದ್ಧ ಎಫ್ಐಆರ್

ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮಲ್ಲಿಕಾ ಘಂಟಿ ಅವರಿಗೆ ಜೀವ ಬೆದರಿಕೆ ಉಂಟು ಮಾಡುವ ರೀತಿ ಚರ್ಚೆ ನಡೆಸಿದ್ದ...

ಶಿವಮೊಗ್ಗ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮಲ್ಲಿಕಾ ಘಂಟಿ ಅವರಿಗೆ ಜೀವ ಬೆದರಿಕೆ ಉಂಟು ಮಾಡುವ ರೀತಿ ಚರ್ಚೆ ನಡೆಸಿದ್ದ ಕುವೆಂಪು ವಿವಿಯ ಒಬ್ಬ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಹೊಸೆಟ್ಟಿ, ಪರೀಕ್ಷಾಂಗ ವಿಭಾಗದ ಸೂಪರಿಂಟೆಂಡೆಂಟ್ ಎಚ್.ಎಸ್. ವಿಜಯ್, ಇದೇ ವಿಭಾಗದ ಪ್ರಥಮ ದರ್ಜೆ ಸಹಾಯಕ ಸಿದ್ದಲಿಂಗ, ಸಲೀಂ ಅವರ ವಿರುದ್ಧ ದೂರು ದಾಖಲಾಗಿದೆ. ಇವರೆಲ್ಲರೂ ಒಟ್ಟಿಗೆ ಕಾರಿನಲ್ಲಿ ಹೋಗುವಾಗ ಲೋಕಾಭಿರಾಮವಾಗಿ ಮಾತನಾಡುತ್ತಾ, ಎಂ.ಎಂ. ಕಲಬುರ್ಗಿ ಅವರ ಹತ್ಯೆ ಮಾದರಿಯಲ್ಲಿಯೇ ಡಾ. ಮಲ್ಲಿಕಾ ಘಂಟಿ ಅವರ ಹತ್ಯೆ ನಡೆಸುವ ಬಗ್ಗೆ ಚರ್ಚಿಸಿದ್ದರು.
ಇವರೊಂದಿಗೆ ಪಯಣಿಸುತ್ತಿದ್ದ ವಿವಿಯ ಮಹಿಳಾ ಉದ್ಯೋಗಿಯೊಬ್ಬರು ಇದನ್ನು ಧ್ವನಿಮುದ್ರಿಸಿಕೊಂಡು ಮಲ್ಲಿಕಾ ಘಂಟಿ ಅವರಿಗೆ ತಲುಪಿಸಿದ್ದರು. ಇದರ ಆಧಾರದ ಮೇಲೆ ಮಲ್ಲಿಕಾ ಘಂಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಧ್ವನಿಮುದ್ರಿಕೆಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 
ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವರಾಗಿದ್ದ ಪ್ರೊ. ಭೋಜಾನಾಯ್ಕ ಅವರೂ ತಮಗೆ ಬೆದರಿಕೆ ಹಾಕಿದ್ದಾರೆಂದು ಪ್ರೊ. ಮಲ್ಲಿಕಾ ಘಂಟಿ ಅವರು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಈ ಹಿಂದೆಯೇ ದೂರು ಸಲ್ಲಿಸಿದ್ದರು. ಈ ಎರಡೂ ಪ್ರಕರಣಗಳ ತನಿಖೆಯನ್ನು ಭದ್ರಾವತಿ ಗ್ರಾಮಾಂತರ ಠಾಣಾಧಿಕಾರಿ ಮಂಜುನಾಥ ಲಿಂಗಾರೆಡ್ಡಿ ಅವರು ನಡೆಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT