ಬೆಂಗಳೂರು: ಸಾಮಾಜಿಕ ತಾಣದಲ್ಲಿ ತಮಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪತ್ರಕರ್ತೆ ಚೇತನಾ ತೀರ್ಥಹಳ್ಳಿ ಅವರು ಶನಿವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಮಧುಸುಧನ್ ಗೌಡ ಎಂಬ ವ್ಯಕ್ತಿ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಅಶ್ಲೀಲ ಕಮೆಂಟ್‌ಗಳನ್ನು ಹಾಕಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚೇತನಾ ಅವರು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.