ಹಾಸನ: ಆಟೋಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಹಾಸನ ಜಿಲ್ಲಾ ಆಲೂರು ತಾಲೂಕಿನ ಪಾಳ್ಯ ಸಮೀಪ ನಡೆದಿದೆ.
ಸಕಲೇಶಪುರದಿಂದ ಹಾಸನ ಕಡೆಗೆ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರನ್ನು ಮೂರ್ತಿ(40), ಕೋಳಿನಾಗಣ್ಣ(46), ಆನಂದ್(32) ಹಾಗೂ ಬಳ್ಳಾರಿ ನಾಗಣ್ಣ ಎಂದು ಗುರುತಿಸಲಾಗಿದೆ.