ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನೊಬ್ಬನನ್ನು ಕೆ.ಆರ್ ಪುರ ಪೊಲೀಸರು ಬಂಧಿಸಿದ್ದಾರೆ.
ಮಾಂಸದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ, ನೆರೆಮನೆಯ ಬಾಲಕಿಯನ್ನು ಪ್ರೀತಿ ಮಾಡುತ್ತಿದ್ದ. ಈ ವಿಷಯ ತಿಳಿದ ಆಕೆಯ ಪಾಲಕರು ಮಗಳಿಂದ ದೂರವಾಗುವಂತೆ ಎಚ್ಚರಿಕೆ ನೀಡಿದ್ದರು.
ಆದರೂ, ಅ.7ರಂದು ಬಾಲಕಿಯನ್ನು ಮುಳಬಾಗಿಲು ಊರಿಗೆ ಕರೆದೊಯ್ದು ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ. ಬಾಲಕಿಯ ಪೋಷಕರು ಅ. 8ರಂದು ಕೆ.ಆರ್. ಪುರ ಠಾಣೆಗೆ ದೂರು ನೀಡಿದ್ದರು. ಮೊಬೈಲ್ ಕರೆ ಆಧರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.