ಮಾಹಿತಿ ನೀಡಿಕೆಯಲ್ಲಿ ಬೆಂಗಳೂರೇ ಮುಂದು
ನಾಲ್ಕು ವರ್ಷಗಳಲ್ಲಿ ಮಾಹಿತಿ ಕೋರಿ ಸಲ್ಲಿಸುವ ಅರ್ಜಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಅರ್ಜಿ ಸಲ್ಲಿಕೆ ಪೈಕಿ ಬೆಂಗಳೂರು ನಗರ ಮತ್ತು ನಗರ ಜಿಲ್ಲೆಗಳು ಅಗ್ರ ಸ್ಥಾನದಲ್ಲಿವೆ.
ನವದೆಹಲಿ: ಕರ್ನಾಟಕ ಮಾಹಿತಿ ಆಯೋಗವು ನಿತ್ಯ 140ಕ್ಕೂ ಹೆಚ್ಚು ಅರ್ಜಿ ವಿಚಾರಣೆ ಮಾಡುತ್ತಿದೆ. ಈ ಪೈಕಿ ಬೆಂಗಳೂರು ಮಹಾ ನಗರ ಪಾಲಿಕೆ, ಬಿಡಿಎ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪೌರಾಡಳಿತ ಇಲಾಖೆಗೆ ಸಂಬಂಧಿಸಿದ ಅರ್ಜಿಗಳೇ ಹೆಚ್ಚು. ನಾಲ್ಕು ವರ್ಷಗಳಲ್ಲಿ ಮಾಹಿತಿ ಕೋರಿ ಸಲ್ಲಿಸುವ ಅರ್ಜಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಅರ್ಜಿ ಸಲ್ಲಿಕೆ ಪೈಕಿ ಬೆಂಗಳೂರು ನಗರ ಮತ್ತು ನಗರ ಜಿಲ್ಲೆಗಳು ಅಗ್ರ ಸ್ಥಾನದಲ್ಲಿವೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಮಾಹಿತಿ ಆಯೋಗದ 10ನೇ ವಾರ್ಷಿಕ ಸಮ್ಮೇಳನದ ಕಾರ್ಯಗಾರದಲ್ಲಿ ಕರ್ನಾಟಕ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಟಿ. ರಾಮಾನಾಯಕ್ ಈ ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.