ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಘಟನೆ, ಮಹಿಳೆ ಮೇಲೆ 6 ಮಂದಿಯಿಂದ ಗ್ಯಾಂಗ್‌ರೇಪ್

ಬಿಪಿಒ ಉದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ.

ಬೆಂಗಳೂರು: ಬಿಪಿಒ ಉದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ.

ಕಳೆದ ಶನಿವಾರ 24 ವರ್ಷದ ಮಹಿಳೆ ಮೇಲೆ ಆಕೆಯ ಸ್ನೇಹಿತ ಸೇರಿದಂತೆ ಆರು ಕಾಮುಕರು ಅತ್ಯಾಚಾರ ಎಸಗಿದ ಘಟನೆ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಮಹಿಳೆಯ ಇಬ್ಬರು ಸ್ನೇಹಿತರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಣ ದೋಚಿ, ಬಳಿಕ ಇತರೆ ನಾಲ್ವರನ್ನು ಕರೆದು ಅತ್ಯಾಚಾರ ಎಸಗಿದ್ದಾರೆ.

ಪತಿಯಿಂದ ಪ್ರತ್ಯೇಕವಾಗಿದ್ದ ಮಹಿಳೆ ದಾವಣಗೆರೆ ಮೂಲದವರಾಗಿದ್ದು, ಕಳೆದ ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿಯ ಅಲಮನೆ ಕ್ವಾಟರ್ಸ್‌ನಲ್ಲಿ ಸ್ನೇಹಿತನೊಂದಿಗೆ ವಾಸವಾಗಿದ್ದ ಮಹಿಳೆ ದಿನಗೂಲಿ ಕೆಲಸ ಮಾಡುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಮಂಜುನಾಥ್ ಮತ್ತು ನಾಗ ಮಹಿಳೆಯನ್ನು ಕಾರಿನಲ್ಲಿ ಹತ್ತಿಸಿಕೊಂಡು, ಇತರೆ ನಾಲ್ವರಿಗೆ ಕರೆ ಮಾಡಿದ್ದಾರೆ. ಬಳಿಕ ಅವರು ನೈಸ್ ರಸ್ತೆಯಲ್ಲಿ ಇವರನ್ನು ಸೇರಿಕೊಂಡಿದ್ದು, ದೊಡ್ಡಲಹಳ್ಳಿ ಕೆರೆ ಬಳಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ನಂತರ ಮಹಿಳೆಯನ್ನು ರಸ್ತೆ ಬದಿ ಬಿಟ್ಟು ಹೋಗಿದ್ದಾರೆ.

ರಸ್ತೆ ಬದಿ ಅರೆನಗ್ನವಾಗಿ ಬಿದ್ದಿದ್ದ ಮಹಿಳೆಯನ್ನು ಗಮನಿಸಿದ ಆಟೋ ಚಾಲಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸಾತನೂರು ಪೊಲೀಸರು ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳಾದ ಮಂಜುನಾಥ್ ಮತ್ತು ನಾಗನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿದ ಕಾಮುಕರು
ಅತ್ಯಾಚಾರಕ್ಕೆ ಒಳಗಾದ ಮಹಿಳೆ ಲೈಂಗಿಕ ಕಾರ್ಯಕರ್ತೆಯಾಗಿದ್ದು, ಪಿಂಪ್ ಗಣೇಶ್ ಮಹಿಳೆಗೆ ಆರೋಪಿಗಳನ್ನು ಪರಿಚಯ ಮಾಡಿಸಿದ್ದ. ಮದ್ಯ ಖರೀದಿಸಿದ ಬಳಿಕ ಮೂವರು ಕಾರಲ್ಲಿ ಮತ್ತು ಮೂವರು ಬೈಕಿನಲ್ಲಿ ಬಂದು ಮಹಿಳೆಯನ್ನು ಕರೆದೊಯ್ದು, ಆಕೆಗೆ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ತನಿಖಾಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT