(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಅಪಘಾತ: ಸೂಡಾನ್ ವಿದ್ಯಾರ್ಥಿ ಸಾವು

ರಾಮಮೂರ್ತಿನಗರ ರಿಂಗ್ ರಸ್ತೆಯ ಎಎಸ್‍ಆರ್ ಕಲ್ಯಾಣ ಮಂಟಪದ ಬಳಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಸೂಡಾನ್ ಮೂಲದ ವಿದ್ಯಾರ್ಥಿ ಮಹಮದ್ ಮಜೀದ್ ಒಸ್ಮಾನ್ (22) ಮೃತಪಟ್ಟಿದ್ದು, ಆತನ ಸ್ನೇಹಿತ ಮೋಸಬ್ (19) ಗಾಯಗೊಂಡಿದ್ದಾರೆ...

ಬೆಂಗಳೂರು: ರಾಮಮೂರ್ತಿನಗರ ರಿಂಗ್ ರಸ್ತೆಯ ಎಎಸ್‍ಆರ್ ಕಲ್ಯಾಣ ಮಂಟಪದ ಬಳಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಸೂಡಾನ್ ಮೂಲದ ವಿದ್ಯಾರ್ಥಿ ಮಹಮದ್ ಮಜೀದ್ ಒಸ್ಮಾನ್ (22) ಮೃತಪಟ್ಟಿದ್ದು, ಆತನ ಸ್ನೇಹಿತ ಮೋಸಬ್ (19) ಗಾಯಗೊಂಡಿದ್ದಾರೆ.

ಎರಡು ವರ್ಷಗಳ ಹಿಂದೆ ಶಿಕ್ಷಣ ವೀಸಾ ಮೇಲೆ ನಗರಕ್ಕೆ ಬಂದಿದ್ದ ಒಸ್ಮಾನ್, ಯಲಹಂಕದ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ. ಮೋಸಬ್ ಪೀಣ್ಯದ ಸಂಭ್ರಮ ಕಾಲೇಜಿನಲ್ಲಿ ಓದುತ್ತಿದ್ದಾನೆ. ಯಲಹಂಕದಲ್ಲಿ ವಾಸವಿದ್ದ ಇಬ್ಬರೂ, ಶನಿವಾರ ರಾತ್ರಿ ವೈಟ್‍ ಫೀನ್ಡ್ ನಲ್ಲಿರುವ ಸ್ನೇಹಿತನ ಮನೆಗೆ ಹೋಗಿದ್ದರು. ಅಲ್ಲಿಂದ ನಸುಕಿನ ಜಾವ 4.15ರ ಸುಮಾರಿಗೆ ಬೈಕ್‍ನಲ್ಲಿ ಮನೆಗೆ ವಾಪಸಾಗುತ್ತಿದ್ದರು. ವೇಗವಾಗಿ ನಿರ್ಲಕ್ಷ್ಯತನದಿಂದ ಬೈಕ್ ಓಡಿಸಿಕೊಂಡು ಬಂದಿರುವ ಮೋಸಬ್ ಎಎಸ್‍ಆರ್ ಕಲ್ಯಾಣ ಮಂಟಪದ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿದ್ದಾನೆ.

ಈ ವೇಳೆ ಅಡ್ಡಾದಿಡ್ಡಿಯಾಗಿ ಚಲಿಸಿದ ಬೈಕ್, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರಣ ಇಬ್ಬರೂ ಸ್ವಲ್ಪ ಮೇಲಕ್ಕೆ ಹಾರಿ ರಸ್ತೆಗೆ ಬಿದ್ದರು. ಗಾಯಾಳುಗಳನ್ನು ಇತರೆ ವಾಹನಗಳ ಸವಾರರು ಬಾಣಸವಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ತಲೆಗೆ ಗಂಭೀರ ಪೆಟ್ಟಾಗಿದ್ದ ಒಸ್ಮಾನ್ ಸ್ವಲ್ಪ ಹೊತ್ತಿನ ಬಳಿಕ ಕೊನೆಯುಸಿರೆಳೆದರು. ಮೋಸಬ್‍ನ ಕಾಲು ಮುರಿದಿದ್ದು, ಹೆಚ್ಚಿನ
ಚಿಕಿತ್ಸೆಗಾಗಿ ಹಾಸ್ಮಾಟ್ ಆಸ್ಪತ್ರೆಗೆ ವರ್ಗಾಯಿಸ ಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ