ಸೈಬರ್ ಕ್ರೈಂ ಠಾಣೆಗೆ ಚಾಲನೆ
ನಗರದ ಇನ್ ಫೆಂಟ್ರಿ ರಸ್ತೆಯಲ್ಲಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನೂತನವಾಗಿ ಪ್ರಾರಂಭಿಸಿರುವ `ಸೈಬರ್ ಕ್ರೈಂ ಪೊಲೀಸ್ ಠಾಣೆ'ಗೆ ಗೃಹ...
ಬೆಂಗಳೂರು: ನಗರದ ಇನ್ ಫೆಂಟ್ರಿ ರಸ್ತೆಯಲ್ಲಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನೂತನವಾಗಿ ಪ್ರಾರಂಭಿಸಿರುವ `ಸೈಬರ್ ಕ್ರೈಂ ಪೊಲೀಸ್ ಠಾಣೆ'ಗೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಚಾಲನೆ ನೀಡಿದರು. ಕಾರ್ಯಕ್ರಮದ ನಂತರ ಮಾತನಾಡಿದ ಡಿಜಿ, ಐಜಿಪಿ ಓಂಪ್ರಕಾಶ್ , ಸೈಬರ್ ಪ್ರಕರಣಗಳನ್ನು ತಡೆಗಟ್ಟಲು ಈ ಸೇವೆ ಪ್ರಾರಂಭಿಸಲಾಗಿದೆ. ಪ್ರಕರಣ ದಾಖಲಿಸಿದ ನಂತರ ತ್ವರಿತಗತಿಯಲ್ಲಿ ಕ್ರಮ ಹಾಗೂ ತನಿಖೆ ಕೈಗೊಳ್ಳಲಾಗು ವುದು ಎಂದು ಹೇಳಿದರು. ಆನ್‍ಲೈನ್‍ನಲ್ಲಿ 5 ಲಕ್ಷಕ್ಕೂ ಕಡಿಮೆ ಪ್ರಮಾಣದ (ಹಣ) ಪ್ರಕರಣಗಳನ್ನು ಸಂಬಂಧಿಸಿದ ಸ್ಥಳೀಯ ಠಾಣೆಗಳಿಗೆ ವಹಿಸಲಾಗುವುದು. ಬೆಂಗಳೂರು
ವ್ಯಾಪ್ತಿಯಲ್ಲಿ ಬೆಂಗಳೂರು ಗ್ರಾಮಾಂತರ , ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಈ ವ್ಯಾಪ್ತಿಯಲ್ಲಿನ ಪ್ರಕರಣಗಳನ್ನು ಬೆಂಗಳೂರಿನ ನೂತನ ಠಾಣೆಯಲ್ಲಿಯೇ ದಾಖಲಿಸಬೇಕು ಎಂದು ತಿಳಿಸಿದರು. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹತೋಟಿಗೆ ತರಲು ಠಾಣೆ ತೆರೆಯ ಲಾಗಿದೆ. ಈಗಾಗಲೇ ರಾಜ್ಯದಲ್ಲಿಮೈಸೂರು, ಕಲಬುರ್ಗಿ, ಧಾರವಾಡ, ದಾವಣಗೆರೆ ಹಾಗೂ ಮಂಗಳೂರಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದ್ದು, ಬೆಂಗ ಳೂರು ಠಾಣೆ ಹೊಸದಾಗಿ ಸೇರ್ಪಡೆಯಾಗಿದೆ ಎಂದರು. ಇದೇ ವೇಳೆ ಡಿಜಿಪಿ ಕಿಶೋರ್‍ಚಂದ್ರ, ನಗರ ಪೊಲೀಸ್ ಆಯುಕ್ತ ಮೇಘರಿಕ್,ಕೇಂದ್ರ ವಲಯ ಐಜಿಪಿ ಅರುಣ್ ಚಕ್ರವರ್ತಿ ಸೇರಿದಂತೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.