ಜಿಲ್ಲಾ ಸುದ್ದಿ

ಭಿತ್ತಿಪತ್ರ ಅಂಟಿಸಿದ್ರೆ ಕಠಿಣ ಕ್ರಮ

ಬೆಂಗಳೂರು: ಮೆಟ್ರೋ ನಿಲ್ದಾಣದ ಕಂಬಗಳು, ಮೇಲ್ಸೇತುವೆ, ಗೋಡೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಕ್ಕಸಿಕ್ಕಲ್ಲಿ ಭಿತ್ತಿ ಪತ್ರ ಅಂಟಿಸಿದರೆ ಅಂತಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವು ದು ಎಂದು ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಟ್ರಿನಿಟಿ ವೃತ್ತದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, ನಗರದಲ್ಲಿ ಸಿಕ್ಕಸಿಕ್ಕಲ್ಲಿ ಬಿsತ್ತಿ ಪತ್ರಗಳನ್ನು ಅಂಟಿಸಲಾಗುತ್ತಿದೆ. ಇದರಿಂದ ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ನಗರದ ಸೌಂದರ್ಯ ಕಾಪಾಡಲು ಹೆಚ್ಚು ಒತ್ತು ನೀಡಲಾಗುವುದು. ಈ ಬಗ್ಗೆ ಗಂಬಿsೀರ ಚಿಂತನೆ ನಡೆಸಿದ್ದು, ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅ„ಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ನಗರದ ಹಸಿರು, ಸೌಂದರ್ಯ ಕಾಪಾಡುವು ದು ಕೇವಲ ಪಾಲಿಕೆಯ ಜವಾಬ್ದಾರಿಯಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅತ್ಯವಶ್ಯ. ಆದ್ದರಿಂದ ಪ್ರತಿಯೊಬ್ಬರು ಸಿಲಿಕಾನ್ ಸಿಟಿಯ ಸ್ವಚ್ಛತೆ ಬಗ್ಗೆ ಎಚ್ಚರದಿಂದಿರಬೇಕು ಎಂದು ಮನವಿ ಮಾಡಿದರು. ಈ ವೇಳೆ ಬಿಎಂಆರ್‍ಸಿಎಲ್‍ನ ಹಿರಿಯ ಅಧಿಕಾರಿಗಳು ಹಾಜರಿದ್ದರು.

SCROLL FOR NEXT