ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ನಕಲಿ ಪ್ರಶ್ನೆಪತ್ರಿಕೆಗೆ ರು. 2 ಲಕ್ಷ!

ದ್ವಿತಿಯ ದರ್ಜೆ ಸಹಾಯಕ (ಎಸ್‍ಡಿಎ) ಹುದ್ದೆ ನಕಲಿ ಪ್ರಶ್ನೆ ಪತ್ರಿಕೆ ಮಾರಾಟ ಪ್ರಕ ರಣ ಸಂಬಂಧ ಬಂಧಿತ ಆರೋಪಿಗಳು ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ...

ಬೆಂಗಳೂರು : ದ್ವಿತಿಯ ದರ್ಜೆ ಸಹಾಯಕ (ಎಸ್‍ಡಿಎ) ಹುದ್ದೆ ನಕಲಿ ಪ್ರಶ್ನೆ ಪತ್ರಿಕೆ ಮಾರಾಟ ಪ್ರಕ ರಣ ಸಂಬಂಧ ಬಂಧಿತ ಆರೋಪಿಗಳು ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಅಸಲಿ ಪ್ರಶ್ನೆ ಪತ್ರಿಕೆಗಳು ಎಂದು ನಂಬಿಸಿ ಅವರಿಂದ ತಲಾ ರು.2 ಲಕ್ಷ ವಸೂಲಿ ಮಾಡಿದ್ದಾರೆ ಎನ್ನುವುದು ಗೊತ್ತಾಗಿದೆ. 8 ಆರೋಪಿಗಳ ಪೈಕಿ ಕೆಲವರು ಈ ಹಿಂದೆ ಹಲವು ಬಾರಿ ಇದೇ ರೀತಿ ಅಭ್ಯರ್ಥಿ ಗಳಿಗೆ ನಕಲಿ ಪತ್ರಿಕೆಗಳು ಹಾಗೂ ಅಸಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷೆಗೆ ಮುಂಚೆ ಸೋರಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಇವರು ನೀಡುವ ಪತ್ರಿಕೆ ಗಳು ಅಸಲಿ ಎಂದು ನಂಬಿದ್ದರು ಎಂದು
ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ತಡರಾತ್ರಿ ಕಾರ್ಯಾಚರಣೆ  ನಡೆಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲ ಯದ ಮುಂದೆ ಹಾಜರುಪಡಿಸಲಾ ಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆದರೆ, ಹೆಚ್ಚಿನ ತನಿಖೆ ಅಗತ್ಯವಿರುವ ಕಾರಣ ಎಲ್ಲರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸುವುದಾಗಿ ಸಿಸಿಬಿ ಡಿಸಿಪಿ ರಮೇಶ್ ತಿಳಿಸಿದರು.
ಕೆಪಿಎಸ್‍ಸಿ ನಡೆಸುವ ಪರೀಕ್ಷೆಗಳ ವೇಳೆ ಆರೋಪಿಗಳು ರಾಜ್ಯದ ವಿವಿಧೆಡೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ನೀಡುವುದಾಗಿ ಹೇಳಿ ಅಭ್ಯರ್ಥಿಗಳಿಗೆ ವಂಚಿಸಿದ್ದಾರೆ ಎನ್ನುವ ಮಾಹಿತಿ ಇದೆ. ಇವರ ತಂಡದ ಪ್ರಮುಖ ಸದಸ್ಯ ನಂದಿನಿ ಲೇಔಟ್‍ನ ಶಿವಕುಮಾರ್ ಕಳೆದ ವರ್ಷ ನಡೆದ ಶಿಕ್ಷಕರ ನೇಮಕಾತಿ ಪರೀಕ್ಷೆಯ ಅರ್ಹತೆಗಾಗಿ ನಡೆಸುವ ಟಿಇಟಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈ ಸಿಐಡಿ ತನಿಖೆ ಪ್ರಗತಿಯಲ್ಲಿದೆ. ಹೀಗಿರು ವಾಗ ಜಾಮೀನಿನ ಮೇಲೆ ಹೊರ ಬಂದಿರುವ ಆರೋಪಿ ನಕಲಿ ಪ್ರಶ್ನೆ ಪತ್ರಿಕೆಗಳ ಮಾರಾಟ ದಂಧೆ ಆರಂಭಿಸಿದ್ದ ಎನ್ನಲಾಗಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ದಿನೇಶ್ ಹಾಗೂ ತಂಡದ ಸದಸ್ಯರು 20 ವಿದ್ಯಾರ್ಥಿಗಳನ್ನು ಮನೆಯಲ್ಲಿ ಇರಿಸಿಕೊಂಡು ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಹುಡುಕಿಸುತ್ತಿದ್ದರು. ಮತ್ತೊಂದು ತಂಡ ದಲ್ಲಿದ್ದ ಈರಮಲ್ಲಪ್ಪ ಹಾಗೂ ಇತರರು ಮೂರ್ನಾಲ್ಕು ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಿ ಉತ್ತರ ಹುಡುಕಿಕೊಳ್ಳುವಂತೆ ಸಿದ್ದತೆ ಮಾಡಿಕೊಳ್ಳಲು ಹೇಳುತ್ತಿದ್ದರು. ಎರಡು ತಂಡಗಳನ್ನು ನಿರ್ವಹಿಸುತ್ತಿದ್ದ ಪ್ರಮುಖ ಆರೋಪಿ ಶಿವಕುಮಾರ್‍ನನ್ನು
ಬಂಧಿಸಿದರೆ ಈ ರೀತಿಯ ಎಷ್ಟು ಜಾಲಗಳನ್ನು ನಿರ್ವಹಿಸುತ್ತಿದ್ದ ಎನ್ನುವುದು ಬಯಲಿಗೆ ಬರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶಿಸ್ತುಕ್ರಮಕ್ಕೆ ಶಿಫಾರಸು
ಬಸವೇಶ್ವರ ನಗರ ಪೊಲೀಸ್ ಕಾನ್ಸ್ ಟೇಬಲ್ ದಿನೇಶ್ ಹಾಗೂ ಡಿಪಿಎಆರ್ ಬೆರಳಚ್ಚುಗಾರ ರವಿ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧ  ಕ್ರಮ ಕೈಗೊಳ್ಳುವಂತೆ
ಸಂಬಂಧಿಸಿದವರಿಗೆ ಪತ್ರ ಬರೆಯಲಾಗಿದೆ ಎಂದು ಸಿಸಿಬಿ ಹಿರಿಯ ಅಧಿಕಾರಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!