(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬಡ ರೋಗಿಗಳಿಗೆ ಸಿಕ್ಕಿತು ಉಚಿತ ಚಿಕಿತ್ಸೆ

ಅಮೆರಿಕ ಮೂಲದ ಮೆಡ್ಟ್ರಾನಿಕ್ ವ್ಯಾಸ್ಕುಲರ್ ಡಿವಿಷನ್ ಹಾಗೂ ಡಾ. ಗೋವಿಂದರಾಜು ಸುಬ್ರಹ್ಮಣಿ ಹಾರ್ಟ್ ಪೌಂಡೇಷನ್ ಸಹಯೋಗದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತುಸಂಶೋಧನಾ ಸಂಸ್ಥೆಯಲ್ಲಿ 150 ಬಡ ರೋಗಿಗಳಿಗೆ ಉಚಿತವಾಗಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಕಾರ್ಯಾಗಾರ ನಡೆಯಿತು...

ಬೆಂಗಳೂರು: ಅಮೆರಿಕ ಮೂಲದ ಮೆಡ್ಟ್ರಾನಿಕ್ ವ್ಯಾಸ್ಕುಲರ್ ಡಿವಿಷನ್ ಹಾಗೂ ಡಾ. ಗೋವಿಂದರಾಜು ಸುಬ್ರಹ್ಮಣಿ ಹಾರ್ಟ್ ಫೌಂಡೇಷನ್ ಸಹಯೋಗದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತುಸಂಶೋಧನಾ ಸಂಸ್ಥೆಯಲ್ಲಿ 150 ಬಡ ರೋಗಿಗಳಿಗೆ ಉಚಿತವಾಗಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಕಾರ್ಯಾಗಾರ ನಡೆಯಿತು.

ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಬಡ ರೈತರು, ದಿನಗೂಲಿ ನೌಕರರು, ಆಟೋ ರಿಕ್ಷಾ ಚಾಲಕರು, ಬೀದಿ ಬದಿಯ ಕಾರ್ಮಿಕರಿಗೆ ರು.1.25 ಕೋಟಿ ಬೆಲೆ
ಬಾಳುವ ಸ್ಟಂಟ್‍ಗಳನ್ನು ಅಳವಡಿಸಲಾ ಯಿತು. ಈ ಕಾರ್ಯಾಗಾರದಲ್ಲಿ ಕರ್ನಾಟಕ ಸೇರಿದಂತೆ ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರ ಮತ್ತು ತಮಿಳು ನಾಡಿನ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ. ಕಾರ್ಯಗಾರದ ಬಗ್ಗೆ ಮಾಹಿತಿ ನೀಡಿರುವ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ``ನಾಲ್ಕು ದಿನದಲ್ಲಿ 150 ರೋಗಿಗಳಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡುವುದು ಒಂದು ಬೃಹತ್ ಸಾಧನೆ. ಏಳು ಮಂದಿ ಕ್ಯಾತ್‍ಲ್ಯಾಬ್, 45 ಮಂದಿ ನುರಿತ ವೈದ್ಯರು ಹಾಗೂ ತಜ್ಞರು ಮತ್ತು ಶುಶ್ರೂಕರು ಹಾಗೂ ಮೂಲ ಸೌಲಭ್ಯದಿಂದ ಈ ಸಾಧನೆ ಸಾಧ್ಯವಾಗಿದೆ'' ಎಂದು ತಿಳಿಸಿದ್ದಾರೆ.

ಅಮೆರಿಕ ಮೂಲದ ಮೆಡ್ಟ್ರಾನಿಕ್ ವ್ಯಾಸ್ಕುಲರ್ ಡಿವಿಷನ್ ಹಾಗೂ ಡಾ. ಗೋವಿಂದರಾಜು ಸುಬ್ರಹ್ಮಣಿ ಹಾರ್ಟ್ ಪೌಂಡೇಷನ್‍ರವರು 1.25 ಕೋಟಿ ಬೆಲೆ ಬಾಳುವ ಸ್ಟಂಟ್‍ಗಳನ್ನು ನೀಡಿದ್ದು, ಜಯದೇವ ಆಸ್ಪತ್ರೆ ಬಡರೋಗಿಗಳ ಚಿಕಿತ್ಸೆಗೆ ರು.50 ಲಕ್ಷ ನೀಡಿದೆ. ಕಾರ್ಯಾಗಾರದಲ್ಲಿ ವಿವಿಧ ಖಾಯಿಲೆಗಳಿಂದ ಬಳಲುತ್ತಿರುವ 29 ವರ್ಷದಿಂದ 76 ವರ್ಷದವರೆಗಿನ ರೋಗಿಗಳು ಚಿಕಿತ್ಸೆಗೆ ಒಳಗಾದರು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!