ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ: ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ
'ಮೈಸೂರಿನ ಹುಲಿ' ಟಿಪ್ಪು ಸುಲ್ತಾನನ ಜಯಂತಿಯನ್ನು ಪ್ರತಿ ವರ್ಷ ನವೆಂಬರ್ 10ರಂದು...
ಬೆಂಗಳೂರು: 'ಮೈಸೂರಿನ ಹುಲಿ' ಟಿಪ್ಪು ಸುಲ್ತಾನನ ಜಯಂತಿಯನ್ನು ಪ್ರತಿ ವರ್ಷ ನವೆಂಬರ್ 10ರಂದು ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬಿದ್ದಿದೆ.
ಧೈರ್ಯ, ಸಾಹಸಗಳಿಗೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಬ್ರಿಟಿಷ್'ರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ್ದರು. ಇವರ ಜನ್ಮ ದಿನವನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂಪಾಯಿ ಮತ್ತು ತಾಲೂಕು ಕೇಂದ್ರಕ್ಕೆ 25 ಸಾವಿರ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
2014 ಡಿಸೆಂಬರ್ನಲ್ಲಿ ಇತಿಹಾಸ ತಜ್ಞ ಪ್ರೊ.ಬಿ. ಶೇಖ್ ಅಲಿ ಅವರು ಟಿಪ್ಪು ಸುಲ್ತಾನ್ ಬಗ್ಗೆ ಬರೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವರ್ಷ ಸರ್ಕಾರದಿಂದಲೇ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಗುವುದು ಎಂದು ತಿಳಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.