(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ವಿದ್ಯುತ್, ನೀರು ಕೊಡದಿದ್ರೆ ಸರ್ಕಾರದ ವಿರುದ್ಧ ಹೋರಾಟ

ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಗುಣ ಮಟ್ಟದ ವಿದ್ಯುತ್ ಜತೆಗೆ ನೀರು ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಜಯರಾಮು ಒತ್ತಾಯಿಸಿದರು...

ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಗುಣ ಮಟ್ಟದ ವಿದ್ಯುತ್ ಜತೆಗೆ ನೀರು ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಜಯರಾಮು ಒತ್ತಾಯಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 100 ಬೃಹತ್ ದೊಡ್ಡ ಕೈಗಾರಿಕೆಗಳಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ತೆರಿಗೆ ಪಾವತಿಯಾಗುತ್ತಿದೆ. ಕೇಂದ್ರ ಅಬಕಾರಿ ಮತ್ತು ಸುಂಕ ರೂಪದಲ್ಲಿ ರು.2600 ಕೋಟಿ, ಕಾರ್ಪೊರೇಟ್ ತೆರಿಗೆ ರೂಪದಲ್ಲಿ ರು.250 ಕೋಟಿ ಹಾಗೂ ರು.1400 ಕೋಟಿ ವಾಣಿಜ್ಯ ತೆರಿಗೆ ಸರ್ಕಾರಕ್ಕೆ ಹೋಗುತ್ತಿದೆ. ಆದರೆ,ಪ್ರಮುಖ ಆದಾಯದ ಮೂಲವಾಗಿರುವ ಈ ಕೈಗಾರಿಕಾ ಪ್ರದೇಶದಲ್ಲಿ ಹಲವು ಸಮಸ್ಯೆಗಳು ಕಾಡುತ್ತಿದ್ದರೂ, ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯವಾಗಿ ವಿದ್ಯುತ್ ಸಮಸ್ಯೆಯಿಂದ ಈ ಭಾಗದ ಕೈಗಾರಿಕೆಗಳು ತೀವ್ರ ತೊಂದರೆ ಅನುಭವಿಸುತ್ತಿವೆ. ತಾಜ್ಯ ವಿಲೇವಾರಿ ಆಗುತ್ತಿಲ್ಲ. ಗುಂಡಿ ಬಿದ್ದ ರಸ್ತೆಗಳಿಂದ ಆಗಾಗ್ಗೆ ಅಪಘಾತ, ಸೂಕ್ತ ಒಳಚರಂಡಿ ಇಲ್ಲದಿರುವುದು, ಟೌನ್‍ಷಿಪ್ ಮಂಜೂರಾಗದಿರುವುದು ಸೇರಿದಂತೆ ಅನೇಕ ಸಮಸ್ಯೆಗಳು ಕಾಡುತ್ತಿವೆ. ಆದರೂ ಸರ್ಕಾರ ಇಲ್ಲಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗ ಣಿಸಿಲ್ಲ. ಇನ್ನಾದರೂ ಈ ಬಗ್ಗೆ ಗಮನ ಹರಿಸದಿದ್ದರೆ, ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ನಡೆಸಲಾ ಗುವುದು ಎಂದು ಎಚ್ಚರಿಸಿದರು. ಸಂಘದ ಉಪಾಧ್ಯಕ್ಷ ಆರ್. ಕೃಷ್ಣಮೂರ್ತಿ, ಕಾರ್ಯದರ್ಶಿ ಎಂ. ಎಂ.ಗಿರಿ, ಜಂಟಿ ಕಾರ್ಯದರ್ಶಿ ಎಚ್.ಎಂ.ಅರೀಫ್ ಇತರರು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT