ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಸಾಲಬಾಧೆ: ಆರು ರೈತರ ಆತ್ಮಹತ್ಯೆ

ರಾಜ್ಯದಲ್ಲಿ ದಸರಾ ಸಂದರ್ಭದಲ್ಲಿಯೂ ಆರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ತಾಲೂಕಿನಲ್ಲಿ ಇಬ್ಬರು...

ಬೆಂಗಳೂರು: ರಾಜ್ಯದಲ್ಲಿ ದಸರಾ ಸಂದರ್ಭದಲ್ಲಿಯೂ ಆರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ತಾಲೂಕಿನಲ್ಲಿ ಇಬ್ಬರು ಗುರುವಾರ ನೇಣಿಗೆ ಶರಣಾಗಿದ್ದಾರೆ.
ಹೈದರ್ ನಗರ ಗ್ರಾಮದ ರತ್ನಪ್ಪ ನಾಯಕ(52), ಇರಕಲ್ ಗಡ ಗ್ರಾಮದ ಗಂಗಾಧರ ಅಂಗಡಿ(31) ಮೃತರು. ಚನ್ನಗಿರಿ ತಾಲೂಕಿನ ಸಿದ್ಧನಮಠ ಗ್ರಾಮದ ಗುರುಶಾಂತಪ್ಪ(70), ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಕೊರಟಿಕೆರೆ ಗ್ರಾಮದ ಮಾದ ಚಲುವ(55) ಶುಕ್ರವಾರ ನೇಣಿಗೆ ಶರಣಾಗಿದ್ದಾರೆ. ಅರ್ಧ ಎಕರೆ ಜಮೀನು ಹೊಂದಿದ್ದ ಅವರು, ಕೆಲವರ ಬಳಿ ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಕನಕಪುರ ತಾಲೂಕು ಬೆಂಡಗೋಡ್ಲವಿನಲ್ಲಿ ಲಕ್ಷ್ಮಣ ನಾಯಕ(50) ಶುಕ್ರವಾರ ನೇಣು ಹಾಕಿಕೊಂಡಿದ್ದಾರೆ. ಇವರು ವಿವಿಧ ಬ್ಯಾಂಕ್ ಗಳಲ್ಲಿ ರು.13 ಲಕ್ಷ ಮತ್ತು ರು.2 ಲಕ್ಷ ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ರಾಮನಗರ ತಾಲೂಕಿನ ಪಾದರಹಳ್ಳಿ ಗ್ರಾಮದ ಜಯರಾಮ ನಾಯ್ಕ(55) ಶುಕ್ರವಾರ ನೇಣು ಹಾಕಿಕೊಂಡಿದ್ದಾರೆ. ಮೂರು ಎಕರೆ ಜಮೀನಿನಲ್ಲಿ ಬೆಳೆ ಬೆಳೆಯಲು ಸಾಲ ಮಾಡಿಕೊಂಡಿದ್ದರು. ನಿರೀಕ್ಷಿತ ಬೆಳೆ ಬಾರದೆ ಸಾಲ ತೀರಿಸಲಾಗಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ