ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಅಧಿಕಾರಿಗು 
ಜಿಲ್ಲಾ ಸುದ್ದಿ

ಪ್ರಶಾಂತ್ ಕೊಲೆ ಪ್ರಕರಣ: ವಿದೇಶಕ್ಕೆ ಹಾರುತ್ತಿದ್ದ 9ನೇ ಆರೋಪಿ ಬಂಧನ

ವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದ ಮೂಡುಬಿದಿರೆ ಪ್ರಶಾಂತ್ ಕೊಲೆ ಪ್ರಕರಣದ 9ನೇ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದ ಮೂಡುಬಿದಿರೆ ಪ್ರಶಾಂತ್ ಕೊಲೆ ಪ್ರಕರಣದ 9ನೇ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಹಮ್ಮದ್ ಇಮ್ತಿಯಾಜ್(40) ಎಂದು ಹೆಸರಿಸಲಾಗಿದ್ದು, ಈತ ದಂಟಕಲ್ ಹಲ್ಲೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿ ಈಗಾಗಲೇ 8 ಮಂದಿಯನ್ನು ಬಂಧಿಸಿದ್ದು, ಅವರು ನೀಡಿದ ಮಾಹಿತಿಯಂತೆ ಈತನನ್ನು ಬಂಧಿಸಲಾಗಿದೆ.

ಇದರೊಂದಿಗೆ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 9ಕ್ಕೆ ಏರಿದೆ. ತಲೆಮರೆಸಿಕೊಂಡಿದ್ದ ಈತ ಶುಕ್ರವಾರ ದುಬೈಗೆ ಪರಾರಿಯಾಗಲು ಮುಂಬೈನ ನಾಗಪುರ ವಿಮಾನ ನಿಲ್ದಾಣದಲ್ಲಿ ವಲಸೆ ವಿಭಾಗದಲ್ಲಿದ್ದ. ಆತನ ಪಾಸ್‍ಪೊರ್ಟ್ ಪರಿಶೀಲನೆ ವೇಳೆ ಮೂಡುಬಿದಿರೆ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಕೂಡಲೇ ವಲಸೆ ವಿಭಾಗದ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡು ಮಂಗಳೂರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಎಡಿಜಿಪಿ ಅಲೋಕ್ ಮೋಹನ್, ಇಮ್ತಿಯಾಜ್ ಹೊರತುಪಡಿಸಿ ಉಳಿದ 8 ಮಂದಿ ಪಿಎಎಫ್ ಐ ಸಂಘಟನೆ ಜತೆ ಸಂಪರ್ಕವಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಈತನ ಮೇಲೆ ಪ್ರಶಾಂತ್ ಹತ್ಯೆಗೆ ಯೋಜನೆ ರೂಪಿಸಿದ ಆರೋಪವಿದೆ  ಇನ್ನೂ ಎಷ್ಟು ಮಂದಿ ಕೊಲೆ ಕೃತ್ಯದಲ್ಲಿ ಕೈಜೋಡಿಸಿದ್ದಾರೆ ಎಂಬುದು ಪೂರ್ತಿ ತನಿಖೆ ನಂತರ ಎಲ್ಲವೂ ಗೊತ್ತಾಗಲಿದೆ ಎಂದರು. ಮೂಡುಬಿದಿರೆ ಘಟನೆಯಲ್ಲಿ ಬೆದರಿಕೆ ಕರೆ ಬಂದ ಬಗ್ಗೆ ಸೈಬರ್ ಕ್ರೈಂನಡಿ ತನಿಖೆ ನಡೆಸಲಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೊಸ್ಟ್ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಯಲ್ಲಿ ಪೊಲೀಸರು ಪಕ್ಷಪಾತ ಎಸಗಿಲ್ಲ, ಈ ಕುರಿತ ಆರೋಪಗಳಲ್ಲಿ ಹುರುಳಿಲ್ಲ ಎಂದರು. ಪಶ್ಚಿಮ ವಲಯ ಐಜಿಪಿ ಅಮೃತ್ ಪಾಲ್, ನಗರ ಪೊಲೀಸ್ ಕಮಿಷನರ್ ಮುರುಗನ್, ಜಿಲ್ಲಾ ಎಸ್ಪಿ ಡಾ.ಶರಣಪ್ಪ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ