ಬೆಂಗಳೂರು: 2016ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕರಡು ವೇಳಾಪಟ್ಟಿಯನ್ನು ಪ್ರಕಟಿಸಿದೆ. ವೇಳಾಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದರೆ ನವೆಂಬರ್ 20ರೊಳಗೆ ಸಲ್ಲಿಸಬಹುದಾಗಿದೆ.
ಮಾರ್ಚ್ 10 ರಿಂದ ಮಾರ್ಚ್ 26 ತನಕ ಪರೀಕ್ಷೆಗಳು ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಿ.ಎಸ್. ರಮೇಶ್ ಅವರು ಪ್ರಕಟಣೆ ಹೊರಡಿಸಿದ್ದಾರೆ. ಕರಡು ವೇಳಾಪಟ್ಟಿಯ ಪ್ರಕಾರ 2016ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 10ರಿಂದ 26ರವರೆಗೆ ನಡೆಯಲಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 9 ರಿಂದ 12.15ರ ತನಕ ನಡೆಯಲಿವೆ.
ಆದರೆ, ಮಾರ್ಚ್ 17ರಂದು ನಡೆಯುವ ಪರೀಕ್ಷೆಗಳ ಪೈಕಿ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನ 2ರಿಂದ 5.15ರವರೆಗೆ ನಡೆಯಲಿದೆ ಎಂದು ಕರಡು ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.
ಒಂದು ವೇಳೆ ಆಕ್ಷಪಣೆಗಳಿದ್ದರೇ, ಆಕ್ಷೇಪಣೆಗಳನ್ನು ಸಲ್ಲಿಸಬೇಕಾದ ವಿಳಾಸ : ಜಂಟಿ ನಿರ್ದೇಶಕರು (ಪರೀಕ್ಷೆ), ಪದವಿ ಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560012.
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ