ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬಾಲಕಿ ಅತ್ಯಾಚಾರ: ದೂರು ದಾಖಲಿಸದ ಪೊಲೀಸರು

ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಆದರೆ, ನ್ಯಾಯ...

ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಆದರೆ, ನ್ಯಾಯ  ಕೊಡಬೇಕಾದ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೆ ಪಾಲಕರನ್ನು ಹೆದರಿಸಿ ಕಳುಹಿಸಿದ್ದು, ಸುವರ್ಣ ನ್ಯೂಸ್ ತಂಡ ಬೆನ್ನುಬಿದ್ದ ಪರಿಣಾಮ ಎಚ್ಚೆತ್ತು ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ. ಅ. 15ರಂದು ಸಂಜೆ ಸುಮಾರು 7 ಗಂಟೆ ಹೊತ್ತಿಗೆ ಶಿಗ್ಗಾವಿ ಪಟ್ಟಣದಲ್ಲಿರುವ ಹೊಸಜೀವನ ಎನ್‍ಜಿಓ ಕಚೇರಿಯಲ್ಲಿ ಟ್ಯೂಷನ್ ಮುಗಿಸಿ ಸಹಪಾಠಿಗಳೊಂ ದಿಗೆ ಬಾಲಕಿ ಬರುತ್ತಿದ್ದಳು. ಶಬರಿನಗರದ ನಿರ್ಜನ ಪ್ರದೇಶದಲ್ಲಿ ಬಾಲಕಿಯರ ಮೇಲೆ ಬೈಕ್‍ನಲ್ಲಿ ಬಂದ ಇಬ್ಬರು ಯುವಕರು ದಾಳಿ ನಡೆಸಿದ್ದಾರೆ. ಆಗ ತಪ್ಪಿಸಿಕೊಳ್ಳಲು ಬಾಲಕಿಯರು ಓಡುವ ವೇಳೆ ಈಕೆ  ಮಾತ್ರ ಸಿಕ್ಕಿಬಿದ್ದಿದ್ದು, ಅತ್ಯಾಚಾರವೆಸಗಲಾಗಿದೆ. ಬಾಲಕಿಯ ಅಪ್ಪ, ಅಮ್ಮ ತೀರಿಕೊಂಡಿದ್ದು,
ದೊಡ್ಡಪ್ಪನ ಆಶ್ರಯದಲ್ಲಿ ಬೆಳೆಯುತ್ತಿದ್ದಾಳೆ. ಇನ್ನೂ ನಾಲ್ಕು ಪುಟ್ಟ ಸಹೋದರಿಯರಿದ್ದಾರೆ. ತೀವ್ರ ಹೆದರಿದ್ದ ಬಾಲಕಿ ಮನೆಯವರಿಗೆ ಅತ್ಯಾಚಾರ ಬಗ್ಗೆ ತಿಳಿಸಿರಲಿಲ್ಲ. ಆದರೆ, ವಿಷಯ ತಿಳಿದ ಪಾಲಕರು ಪೊಲೀಸರಿಗೆ ದೂರು ನೀಡಲು ಹೋದರೆ, ಪಿಎಸ್‍ಐ ಶಶಿಧರ್ ಪ್ರಕರಣ ದಾಖಲಿಸಿಕೊಳ್ಳದೆ ಬೆದರಿಸಿ ಕಳುಹಿಸಿದ್ದಾರೆ. ಆರೋಪಿಗಳು ಯಾರು ಎಂದು ಹೇಳಿ, ಆಮೇಲೆ ಪ್ರಕರಣ ದಾಖಲಿಸಿಕೊಳ್ಳುತ್ತೇವೆಂದು ಹೇಳಿದ್ದಾರೆಂದು ಬಾಲಕಿ ದೊಡ್ಡಪ್ಪ ಆರೋಪಿಸಿದ್ದಾರೆ. ಘಟನೆಯಿಂದ ಕುಟುಂಬ ಹೆದರಿ 10 ದಿನವಾದರೂ ಏನೂ ಮಾಡಲಾಗದೆ ಸುಮ್ಮನೆ ಕುಳಿತಿದ್ದರು. ಪ್ರಕರಣ ಬಗ್ಗೆ ಸುವರ್ಣ ನ್ಯೂಸ್‍ಗೆ ಮಾಹಿತಿ ದೊರೆಯುತ್ತಿದ್ದಂತೆ
ಎಸ್‍ಪಿರನ್ನು ಸಂಪರ್ಕಿಸಲಾಗಿದೆ. ಆಗ ಶಿಗ್ಗಾವಿ ಪೊಲೀಸರು ಪ್ರಕರಣ ದಾಖಲಿಸಲು ಮುಂದಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video