ಸಾಲಬಾಧೆ ರೈತರ ಬಲಿ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಸಾಲಬಾಧೆಗೆ ಮತ್ತಿಬ್ಬರು ರೈತರು ಬಲಿ

ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರೆದಿದ್ದು, ಮಂಗಳವಾರವೂ ಕೂಡ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ...

ಕೊಪ್ಪಳ: ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರೆದಿದ್ದು, ಮಂಗಳವಾರವೂ ಕೂಡ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಕೊಪ್ಪಳ ಮತ್ತು ಗುಬ್ಬಿ ತಾಲ್ಲೂಕಿನಲ್ಲಿ ಇಬ್ಬರು ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಗುಬ್ಬಿ ತಾಲ್ಲೂಕಿನ ಅಳೀಲುಗಟ್ಟಿ ಮಧಿರೆಯ  ಪತಿಯೆಪ್ಪನಪಾಳ್ಯ ಗ್ರಾಮದ ಕೆಂಪರಂಗಯ್ಯ(51) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಆತ ಮಾಡಿಕೊಂಡಿದ್ದ 5.50 ಲಕ್ಷ ರು. ಸಾಲವೇ ಕಾರಣ ಎಂದು ಹೇಳಲಾಗುತ್ತಿದೆ.

ಮೃತ ರೈತ ಕೆಂಪರಂಗಯ್ಯ ತನ್ನ ಎರಡು ಎಕರೆ ಜಮೀನಿನಲ್ಲಿ ಕೃಷಿಗೋಸ್ಕರ ಕೊಳವೆ ಬಾವಿಯನ್ನು ಕೊರೆಸಿದ್ದನು. ಸಕಾಲಕ್ಕೆ ಮಳೆ ಬಾರದ ಹಿನ್ನೆಲೆಯಲ್ಲಿ ಕೊಳವೆ ಬಾವಿ ಬತ್ತಿ ಹೋಗಿತ್ತು. 4  ಲಕ್ಷ ರು.ಗಳಷ್ಟು ಕೈ ಸಾಲ ಮತ್ತು ಸ್ಥಳೀಯ ಕೆಜಿಬಿ ಬ್ಯಾಂಕ್‌ನಿಂದ 1.50 ಲಕ್ಷ ರು.ಗಳಷ್ಟು ಸಾಲ ಮಾಡಿದ್ದನು. ಈ ಕಾರಣದಿಂದ ಸಾಲ ತೀರಿಸಲಾಗದೆ ಮನನೊಂದು ನಿನ್ನೆ ರಾತ್ರಿ ಮನೆಯಲ್ಲಿಯೇ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಚೇಳೂರು ಠಾಣೆ ಪಿಎಸ್‌ಐ ಎಫ್.ಕೆ.ನದಾಫ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನು ಇಂತಹುದೇ ಮತ್ತೊಂದು ಸುದ್ದಿಯೊಂದು ಕೊಪ್ಪಳದಲ್ಲಿ ವರದಿಯಾಗಿದ್ದು, ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು  ತಿಳಿದುಬಂದಿದೆ. ಜಿಲ್ಲೆಯ ಹಲಗೇರಿ ಗ್ರಾಮದ ರವಿ(30) ಮೃತ ರೈತನಾಗಿದ್ದು, ರವಿ ತನ್ನ 10 ಎಕರೆ ಜಮೀನಿನಲ್ಲಿ ಮೆಕ್ಕೆ ಜೋಳ, ಸೂರ್ಯಕಾಂತಿ ಬೆಳೆಯನ್ನು ಬೆಳದಿದ್ದ. ಇದಕ್ಕಾಗಿ ಸುಮಾರು  ಒಂದು ಲಕ್ಷಕ್ಕೂ ಹೆಚ್ಚು ಕೈ ಸಾಲ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಮಳೆ ಬಾರದೆ ಬೆಳೆ ಕೈ ಕೊಟ್ಟ ಪರಿಣಾಮ ಸಾಲ ತೀರಿಸಲಾಗದೆ ರವಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ಕೊಪ್ಪಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್