ವಿಷ್ಣುವರ್ಧನ್ ಸ್ಮಾರಕ- ಹೈಕೋರ್ಟ್ 
ಜಿಲ್ಲಾ ಸುದ್ದಿ

ಡಾ.ವಿಷ್ಣುವರ್ಧನ್ ಟ್ರಸ್ಟ್‌ಗೆ 2 ಎಕರೆ ಭೂಮಿ ಹಸ್ತಾಂತರಕ್ಕೆ ಹೈಕೋರ್ಟ್ ತಡೆ

ನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಡಾ.ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು...

ಬೆಂಗಳೂರು: ನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಡಾ.ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು ಎಕರೆ ಜಮೀನು ಹಸ್ತಾಂತರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ.
ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು ಎಕರೆ ಭೂಮಿಯನ್ನಾ ಹಸ್ತಾಂತರ ಮಾಡಲಾಗಿತ್ತು. ಈ ಸಂಬಂಧ ಸೆಪ್ಟೆಂಬರ್ 18, 22ರಂದು ಆದೇಶ ಹೊರಡಿಸಲಾಗಿತ್ತು. ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಿರಿಯ ನಟ ಬಾಲಕೃಷ್ಣರ ಪುತ್ರರಾದಂತಹ ಗಣೇಶ್ ಹಾಗೂ ಶ್ರೀನಿವಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಷ್ಣು ಪ್ರತಿಷ್ಠಾನಕ್ಕೆ ಭೂಮಿ ನೀಡಲು ನಮ್ಮ ಆಕ್ಷೇಪವಿಲ್ಲ. ಆದರೆ ರಾಜ್ಯ ಸರ್ಕಾರ ಭೂಮಿಗೆ ಪರಿಹಾರ ನೀಡಿಲ್ಲ. ಕೇವಲ ಬಿಳಿ ಹಾಳೆ ಮೇಲೆ ನಮ್ಮಿಂದ ಒಪ್ಪಿಗೆ ರುಜು ಪಡೆದಿದ್ದಾರೆ. ಕಾನೂನಿನ ಪ್ರಕ್ರಿಯೆ ಪಾಲಿಸದೇ ಅನ್ಯಾಯ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು. 
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಣೇಶ್ ಮತ್ತು ಶ್ರೀನಿವಾಸ್ ಅವರ ವಾದವನ್ನು ಪರಿಗಣಿಸಿ ಜಮೀನು ಹಸ್ತಾಂತರಕ್ಕೆ ಮಧ್ಯಂತರ ತಡೆ ನೀಡಿದೆ. ಅಲ್ಲದೇ, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು