(ಸಾಂದರ್ಭಿಕ ಚಿತ್ರ)x 
ಜಿಲ್ಲಾ ಸುದ್ದಿ

ಕಪಿಲ್ ಮೋಹನ್ ಸ್ನೇಹಿತನ ಬಂಧನ

ಹಿರಿಯ ಐಎಎಸ್ ಅಧಿಕಾರಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಸೇರಿದ ಯಶವಂತಪುರದ ಅಪಾರ್ಟ್‍ಮೆಂಟನಲ್ಲಿ ಸಿಕ್ಕಿದ್ದ 4.37 ಕೋಟಿ ಹಣ ತಮಗೆ ಸೇರಿದ್ದೆಂದು ಉದ್ಯಮಿ ಜಯಶಿವ ಸಕ್ಸೇನಾ ಎಂಬುವರು...

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಸೇರಿದ ಯಶವಂತಪುರದ ಅಪಾರ್ಟ್‍ಮೆಂಟನಲ್ಲಿ ಸಿಕ್ಕಿದ್ದ 4.37 ಕೋಟಿ ಹಣ ತಮಗೆ ಸೇರಿದ್ದೆಂದು ಉದ್ಯಮಿ ಜಯಶಿವ ಸಕ್ಸೇನಾ ಎಂಬುವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಯಶಿವ ಸಕ್ಸೇನಾ ಅವರನ್ನು ಸೋಮವಾರ ಬಂಧಿಸಿದ್ದಾರೆ. ಇದರೊಂದಿಗೆ ಕಪಿಲ ಮೋಹನ್ ಹಾಗೂ ಉದ್ಯಮಿ ಜಯಶಿವ ಸಕ್ಸೇನಾ ನಡುವೆ ನಂಟು ಇರುವುದು ತನಿಖೆಯಲ್ಲಿ ಬಹಿರಂಗಗೊಂಡಿದೆ. ಹುಬ್ಬಳ್ಳಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ತನಿಖೆ ನಡೆಸುತ್ತಿದ್ದ ಸಿಐಡಿ ಅಧಿಕಾರಿಗಳು ಅಗಸ್ಟ್ ತಿಂಗಳ ಎರಡನೇ ವಾರದಲ್ಲಿ
ಯಶವಂತಪುರದಲ್ಲಿರುವ ಕಪಿಲ್ ಮೋಹನ ಅಪಾರ್ಟ್‍ಮೆಂಟ್ ಮೇಲೆ ದಾಳಿ ನಡೆಸಿದ್ದಾರೆ

ಈ ವೇಳೆ 4.37ಕೋಟಿ ಹಣದ ಜೊತೆಗೆ ಅಪಾರ ಚಿನ್ನಾಭರಣ, ವಜ್ರ ಹಾಗೂ ವಿವಿಧ ಆಸ್ತಿ ದಾಖಲೆ ಪತ್ರಗಳು ಸಿಕ್ಕಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ಆದಾಯ ತೆರಿಗೆ ಇಲಾಖೆಗೆ ವಹಿಸಿದ್ದರು. ಅಲ್ಲದೇ ಅಕ್ರಮ ಆಸ್ತಿ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಕೂಡ ತನಿಖೆ ಕೈಗೊಂಡಿದ್ದರು. ಅಪಾರ ಹಣ ಎಲ್ಲಿಂದ ಬಂತು ಎಂದು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿರುವ ನಡುವೆ ಉದ್ಯಮಿ ಜಯಶಿವ ಸಕ್ಸೇನಾ ಪ್ರವೇಶವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT