ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಹಿಳೆ ಅಪಹರಿಸಿದ ಆರೋಪಿಗಳು ಕೆಲವೇ ಗಂಟೆಗಳಲ್ಲಿ ಸೆರೆ

ಸುಬ್ರಮಣ್ಯಪುರ ಸಮೀಪದ ವಸಂತಪುರದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿಕೊಂಡು ಹೋಗುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿರುವ...

ಬೆಂಗಳೂರು: ಸುಬ್ರಮಣ್ಯಪುರ ಸಮೀಪದ ವಸಂತಪುರದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿಕೊಂಡು ಹೋಗುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿರುವ ಸುಬ್ರಮಣ್ಯಪುರ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ.

ಕೋಣನಕುಂಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಾದ ಗಣೇಶ, ಚಂದ್ರಶೇಖರ್,ರವಿಕಿರಣ್, ಅರವಿಂದ, ಉದಯ್ ಹಾಗೂ ರಮೇಶ್ ಬಂಧಿತರು.ಅಪಹರಣದ ಸೂತ್ರದಾರ 70 ವರ್ಷದ ನಾಗರಾಜ್ ಹಾಗೂ ಹರೀಶ್ ಎಂಬುವರು ತಲೆಮರೆಸಿಕೊಂಡಿ
ದ್ದು, ಅವರ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಭಾನುವಾರ (ಅ.25) ಸುಮಿತ್ರಾ(35) ಎಂಬುವರನ್ನು ಆರೋಪಿಗಳು ವಾಹನದಲ್ಲಿ ವಸಂತ ಪುರದ ಅವರ ಮನೆಯಿಂದ ಅಪಹರಿಸಿಕೊಂಡು ಹೋಗುತ್ತಿದ್ದರು. ಕೂಡಲೇ ಸುಮಿತ್ರಾ ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ನಾಕಾ ಬಂಧಿ ಹಾಕಿ ಮಹಿಳೆಯನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ನಾಗರಾಜ್‍ರ ಪುತ್ರಿ ರಮ್ಯಾ(ಹೆಸರು ಬದಲಿಸಲಾಗಿದೆ) ಎಂಬುವರನ್ನು ಆಕೆಯ ಸ್ನೇಹಿತ ಕರೆದುಕೊಂಡು ಹೋಗಿದ್ದ. ಆದರೆ, ರಮ್ಯಾಗೆ ಪರಿಚಿತರಾಗಿದ್ದ ಸುಮಿತ್ರಾ ಅವರಿಗೆ ಈ ಬಗ್ಗೆ ಮಾಹಿತಿ ಇತ್ತು. ರಮ್ಯಾ ಈ ಹಿಂದೆಯೂ ವ್ಯಕ್ತಿಯ ಜತೆ ಹೋಗಿದ್ದರು. ಈ ಬಗ್ಗೆ ಸಂಪೂರ್ಣ ಮಾಹಿತಿ ಸುಮಿತ್ರಾ ಹೊಂದಿದ್ದು, ಅವರ ಕುಮ್ಮಕ್ಕಿನಿಂದಲೇ ರಮ್ಯಾ ಪರಾರಿಯಾಗಿದ್ದಾರೆಂದು ಕುಪಿತಗೊಂಡ ನಾಗರಾಜ್, ಹುಡುಗರ ಮೂಲಕ ಅಪಹರಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ರಮ್ಯಾ ಹಾಗೂ ಯುವಕ ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್