ಜಿಲ್ಲಾ ಸುದ್ದಿ

ಅಕ್ರಮ ಟಿಟಿ, ಮ್ಯಾಕ್ಸಿಕ್ಯಾಬ್ ಗಳನ್ನು ಜಪ್ತಿ ಮಾಡಿ; ರಾಮಲಿಂಗಾರೆಡ್ಡಿ

Lingaraj Badiger

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಮಾರ್ಗಗಳಲ್ಲಿ ಅಕ್ರಮವಾಗಿ ಪ್ರಯಾಣಿಕರನ್ನು ಕರೆದೊಯ್ಯುವ ಖಾಸಗಿ ಟೆಂಪೊ ಟ್ರಾವೆಲ್ಲರ್ ಹಾಗೂ ಮ್ಯಾಕ್ಸಿಕ್ಯಾಬ್ ಗಳನ್ನು ಜಪ್ತಿ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾರ ಸಾರಿಗೆ ಆಯುಕ್ತ ಡಾ.ರಾಮೇಗೌಡರಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಎಂಟಿಸಿ ಮಾರ್ಗಗಳಲ್ಲಿ ಟಿಟಿ ವಾಹನ, ಮ್ಯಾಕ್ಸಿ ಕ್ಯಾಬ್ ಗಳು ಸಂಚರಿಸಬಾರದು. ಕಾನೂನು ಬಾಹಿರವಾಗಿ ಪ್ರಯಾಣಿಕರನ್ನು ಕರೆದೊಯ್ಯುವ ಟಿಟಿ ವಾಹನ ಹಾಗೂ ಮ್ಯಾಕ್ಸಿಕ್ಯಾಬ್ ಗಳು ವಿರುದ್ಧ ಕಾನೂನಿನಡಿ ಕ್ರಮ ಕೈಗೊಂಡು, ವಾವನಗಳನ್ನು ಜಪ್ತಿ ಮಾಡುವಂತೆ ಸೂಚಿಸಲಾಗಿದೆಎಂದರು.

ಬಿಎಂಟಿಸಿ ಬಸ್ ಗಳು ಸಂಚರಿಸುವ ಮಾರ್ಗಗಳಲ್ಲಿ ಟಿಟಿ ಹಾಗೂ ಮ್ಯಾಕ್ಸಿ ಕ್ಯಾಬ್ ಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಬಿಎಂಟಿಸಿ ನಷ್ಟವಾಗುತ್ತಿದೆ. ಹೀಗಾಗಿ ಮ್ಯಾಕ್ಸಿ ಕ್ಯಾಬ್ ಗಳ ಹಾವಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಖಾಸಗಿ ಕಂಪನಿಗಳ ಸಿಬ್ಬಂದಿ ಸಾಗಾಟ ಮಾಡುವ ಮ್ಯಾಕ್ಸಿಕ್ಯಾಬ್ ಗಳಿಗೆ ಯಾವುದೇ ತೊಂದರೆ ಇಲ್ಲ. ಅಲ್ಲದೇ ಆನ್ ಲೈನ್ ನಲ್ಲಿ ಬುಕ್ ಮಾಡುವ ಪಿಕ್ ಅಪ್ ವಾಹನಗಳಿಗೆ ನಿರ್ಬಂಧ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

SCROLL FOR NEXT