ರಾಜ್ಯೋತ್ಸವ ಪ್ರಶಸ್ತಿ: ತಡೆ ನೀಡಲು ನಕಾರ
ಸಾಧಕರು ಎಂದು ಗುರುತಿಸಿ ನೀಡಿರುವ ಪ್ರಶಸ್ತಿಗಳನ್ನು ಹಿಂತಿರುಗಿಸುತ್ತಿರುವಾಗ ಪ್ರಶಸ್ತಿ ವಿತರಣೆಗೆ ಮಾರ್ಗ ಸೂಚಿಗಳನ್ನು...
ಬೆಂಗಳೂರು: ಸಾಧಕರು ಎಂದು ಗುರುತಿಸಿ ನೀಡಿರುವ ಪ್ರಶಸ್ತಿಗಳನ್ನು ಹಿಂತಿರುಗಿಸುತ್ತಿರುವಾಗ ಪ್ರಶಸ್ತಿ ವಿತರಣೆಗೆ ಮಾರ್ಗ ಸೂಚಿಗಳನ್ನು ಅಳವಡಿಸುವುದು ಅಗತ್ಯವಿದೆಯೇ? ಎಂದು ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಹೈಕೋರ್ಟ್ ನಿರ್ದೇಶನ ವಿದ್ದರೂ ತನಗೆ 2015ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿಲ್ಲ ಎಂದು ಆರೋಪಿಸಿ ಶುಕ್ರವಾರವಷ್ಟೇ ರಾಜ್ಯ ಸರ್ಕಾರ ಪ್ರಕಟಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಶ್ನಿಸಿ ಸಾಹಿತಿ ಬಿ.ವಿ.ಸತ್ಯನಾರಾಯಣ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆನಂದ ಬೈರಾರೆಡ್ಡಿ ಅವರು, ಭಾನುವಾರ ನಡೆಯಲಿರುವ 2015ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರದಾನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದರು. ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಸರ್ಕಾರ ನೀಡುತ್ತಿರುವ ಪ್ರಶಸ್ತಿಗಳು ಜಾತಿಗಳನ್ನು ಆಧಾರವಾಗಿಟ್ಟುಕೊಂಡು ನೀಡುತ್ತಿದ್ದಾರೆ. ಸಾಧಕರಿಗೆ ಪ್ರಶಸ್ತಿ ನೀಡುತ್ತಿಲ್ಲ. ಇದಕ್ಕೆ ಸೂಕ್ತ ಮಾರ್ಗಸೂಚಿ ಇಲ್ಲದಿರುವುದೇ ಕಾರಣ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ನೀಡಿರುವ ಪ್ರಶಸ್ತಿಗಳನ್ನು
ಹಿಂತಿರುಗಿಸುತ್ತಿದ್ದಾರೆ. ಹೀಗಿರುವಾಗ ಮಾರ್ಗಸೂಚಿ ಅಗತ್ಯವೇ ಎಂದು ಮೌಖಿಕವಾಗಿ ಪ್ರಶ್ನಿಸಿದರು.