(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ ಕಿಮ್ಸ್ ದಾದಿಯರು

ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ವಿವಿ ಪುರದಲ್ಲಿರುವ ಒಕ್ಕಲಿಗರ ಸಂಘದ ಕಚೇರಿ ಎದರು ಪ್ರತಿಭಟನಾನಿರತ 10 ನರ್ಸ್ ಗಳು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ...

ಬೆಂಗಳೂರು: ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ವಿವಿ ಪುರದಲ್ಲಿರುವ ಒಕ್ಕಲಿಗರ ಸಂಘದ ಕಚೇರಿ ಎದರು ಪ್ರತಿಭಟನಾನಿರತ 10 ನರ್ಸ್ ಗಳು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸುಷ್ಮಾ, ಸುಮಾ, ದೀಪಿಕಾ, ಶುಭಾ, ಲಾವಣ್ಯ, ಕಲಾ, ಕೃತಿ, ಸ್ಮಿತಾ, ರೂಪಾ ಹಾಗೂ ಸುಮತಿ ಆತ್ಮಹತ್ಯೆಗೆ ಯತ್ನಿಸಿದವರು. ಈ ಪೈಕಿ ಲಾವಣ್ಯ, ಕೃತಿ, ಸುಮತಿ ಸ್ಥಿತಿ ಗಂಭೀರವಾಗಿದೆ. ವಿಕ್ಟೋರಿಯಾ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 24 ಗಂಟೆಗಳ ಕಾಲ ಚಿಕಿಸ್ತೆ ಮುಂದುವರಿಸಬೇಕಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಕಿಮ್ಸ್ ನಲ್ಲಿ ಗುತ್ತಿಗೆ ಆಧಾರಲ್ಲಿ ಕಾರ್ಯ ನಿರ್ವಹಿಸುತ್ತಿರುವ 180 ನರ್ಸ್ ಗಳು ತಮ್ಮ ಸೇವೆ ಕಾಯಂಗೊಳಿಸಿ ಎಂದು ಒತ್ತಾಯಿಸಿ ಸಂಘದ ಕಚೇರಿ ಮುಂದೆ ಕಳೆದ 42 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬೇಡಿಕೆ ಈಡೇರಿಕಗೆ ಬಗ್ಗೆ ಭರವಸೆ ಸಿಗದಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಪ್ರತಿಭಟನಾಕಾರರು ಹೇಳಿದರು.

ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಿದ್ರೆ ಮಾತ್ರೆ ಸೇವಿಸಿದ್ದು 3.20ರ ವೇಳೆಗೆ ಅಸ್ವಸ್ಥಗೊಂಡಿದ್ದಾರೆ. ಜತೆಗಿದ್ದವರು ತಕ್ಷಣ ಆ್ಯಂಬುಲೆನ್ಸ್ ನಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಕೊಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾನಿರತ ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತು. ಇದಕ್ಕೂ ಮೊದಲು ಅಸ್ವಸ್ಥಗೊಂಡವರನ್ನು ಕಿಮ್ಸ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲು ಕರೊದೊಯ್ಯಲು ಮುಂದಾದಾಗ ಅವರು ನಿರಾಕರಿಸಿ, ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುವಂತೆ ಕೋರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video