ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಿಎಜಿ ವರದಿ ಆಧರಿಸಿ ಎಫ್ಐಆರ್‍ಗೆ ಸೂಚನೆ: ಹೈ ಕೋರ್ಟ್

ಬೆಂಗಳೂರು: ಮಹಾಲೇಖಪಾಲಕ (ಸಿಎಜಿ)ವರದಿ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಲು ಇರುವ ಕಾನೂನಿನ ವ್ಯಾಪ್ತಿಯೇನು ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿದೆ.

ಡಿ-ನೋಟಿಫಿಕೇಶನ್ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ದುರುದ್ದೇಶದಿಂದ ಕೂಡಿದ್ದು, ಅದನ್ನು ರದ್ದುಪಡಿಸುವಂತೆ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ಮುಂದಿನ ವಿಚಾರಣೆವರೆಗೂ ಬಂಧಿಸದಂತೆ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶವನ್ನು ವಿಸ್ತರಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಯಡಿಯೂರಪ್ಪ ವಿರುದಟಛಿ ಲೋಕಾಯುಕ್ತದವರು ಎಫ್ ಐಆರ್ ದಾಖಲಿಸುವಂತೆ ಆದೇಶ ನೀಡಿ ರುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಮುಂದೆ ಲೋಕಾಯುಕ್ತದವರು ಯಡಿಯೂರಪ್ಪ ವಿರುದಟಛಿ ಎಫ್ಐಆರ್ ದಾಖಲಿಸದಂತೆ ನಿರ್ದೇಶಿಸಬೇಕು. ಈಗಾಗಲೇ ದಾಖಲಿಸಿರುವ ಎಫ್ಐಆರ್‍ಗೆ
ತಡೆ ನೀಡಬೇಕು, ಅವರನ್ನು ಬಂಧಿಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಪಿ ದಳವಾಯಿ, ಎಫ್ಐಆರ್ ದಾಖಲಿಸದಂತೆ ಲೋಕಾಯುಕ್ತದ ಅಧಿಕಾರವನ್ನು ತಡೆ ಹಿಡಿಯುವುದು ಸರಿಯಲ್ಲ. ಅರ್ಜಿದಾರರ ವಿರುದ್ಧ ಲೋಕಾಯುಕ್ತ ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಿರುವುದನ್ನು ಏಕಸದಸ್ಯ ಪೀಠದಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ.

ಲೋಕಾಯುಕ್ತ ಸ್ಥಾನದಲ್ಲಿ ಕಾರ್ಯನಿರ್ವಹಿಸುವವರು ಇದೇ ಹೈಕೋರ್ಟ್‍ನಲ್ಲಿ ಮುಖ್ಯ ನ್ಯಾಯ ಮೂರ್ತಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದವರು. ಆದ್ದರಿಂದ ಈ ಕುರಿತು ಅರ್ಜಿದಾರರಿಗೆ ಆಕ್ಷೇಪವಿದ್ದರೆ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಬಹುದು ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷವಾದರೂ ಏನೂ ಆಗಿಲ್ಲ. ಈಗಲೂ ಏನು ಆಗಲ್ಲ ಎಂದು ಭರವಸೆ ನೀಡಿ ವಿಚಾರಣೆಯನ್ನು ಸೆ.10ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT